ದೇಶಾದ್ಯಂತ 70,589 ಹೊಸ ಕೊರೊನಾ ಕೇಸ್: 776 ಮಂದಿ ಸಾವು!

ಭಾರತದಲ್ಲಿ ದಿನ ಕಳೆದಂತೆ ಕೊರೊನಾ ಕಪ್ಪು ಕಾರ್ಮೋಡ ಆವರಿಸಿಕೊಳ್ಳುತ್ತಲೇ ಇದೆ. ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಾಣಸಿಗುತ್ತಿಲ್ಲ. ಕಳೆದ ಹತ್ತು ದಿನಗಳಿಂದ ಸೋಂಕಿತರ ಸಂಖ್ಯೆ 70 ಸಾವರವನ್ನು ದಾಟಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 70,589 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 61 ಲಕ್ಷ ಗಡಿದಾಟಿದೆ.

ಈವರೆಗೆ ದಾಖಲಾದ ಒಟ್ಟು 61,45,292 ಸೋಂಕಿತರ ಸಂಖ್ಯೆಯಲ್ಲಿ 51,01,398 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ 9,47,576 ಸೋಂಕು ಪ್ರಕರಣಗಳು ಮಾತ್ರ ಇವೆ.

ಜೊತೆಗೆ ಈ ಮಹಾಮಾರಿಗೆ ದೇಶಾದ್ಯಂತ 776 ಮಂದಿ ಸಾವನ್ನಪ್ಪಿದ್ದರೆ, ಒಟ್ಟಾರೆಯಾಗಿ  ಕೊರೋನಾಗೆ 96,318 ಜನ ಸೋಂಕಿತರು ಈವರೆಗೆ ಬಲಿಯಾಗಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 11,42,811 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.28ರವರೆಗೂ 7,31,10,041 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights