ಬಾಬರಿ ಮಸೀದಿ ದ್ವಂಸ ಪ್ರಕರಣ: ಎಲ್ಲಾ ಆರೋಪಿಗಳು ದೋಷಮುಕ್ತ!
ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ 28 ವರ್ಷಗಳ ನಂತರ ತೀರ್ಪು ನೀಡಿರುವ ಸಿಬಿಐ ವಿಶೇಷ ನ್ಯಾಯಾಲಯವು ಬಿಜೆಪಿ ಮತ್ತು ವಿಶ್ವಹಿಂದೂ ಪರಿಷತ್‌ನ ಸದಸ್ಯರು ದೋಷಮುಕ್ತ ಎಂದು ತೀರ್ಪು ನೀಡಿದೆ.
ಮಸೀದಿ ದ್ವಂಸ ಪ್ರಕರಣದಲ್ಲಿ 2 ಎಫ್‌ಐಆರ್‌ಗಳ ವಿಚಾರಣೆ ನಡೆಸಿರುವ ನ್ಯಾಯಾಧೀಶ ಎಸ್.ಕೆ.ಯಾದವ್ ಅವರು ಎಲ್ಲಾ ಆರೋಪಿಗಳೂ ದೋಷಮುಕ್ತ ಎಂದು ಹೇಳಿದ್ದಾರೆ.
ಮಸೀದಿಯನ್ನು ಕೆಡವಿದ್ದ ಅನಾಮಧೇಯ ಕರಸೇವಕರ ವಿರುದ್ಧ (197/1992) ಪ್ರಕರಣ ಮತ್ತು ಮಸೀದಿ ಕೆಡವುವಿಕೆಗೆ ಪ್ರಚೋದನೆ ನೀಡಿದ್ದಕ್ಕಾಗಿ (198/1992) ಪ್ರಕರಣದಲ್ಲಿ 8 ಜನ ಬಿಜೆಪಿ ಮುಖಂಡರ (ಎಲ್.ಕೆ.ಅಡ್ವಾಣಿ, ಎಂ.ಎಂ.ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್, ಲಲ್ಲು ಸಿಂಗ್, ಬಿಬಿ ಶರಣ್ ಸಿಂಗ್) ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಎರಡೂ ಎಫ್‌ಐಆರ್‌ಗಳಲ್ಲಿ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್, ಬಿಜೆಪಿ ಮುಖಂಡ ಎಂ.ಎಂ.ಜೋಶಿ, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳನ್ನು ಹೆಸರಿಸಲಾಗಿತ್ತು.
ಈ ಆರೋಪಿಗಳ ಮೇಲೆ 15ನೇ ಶತಮಾನದ ಬಾಬರಿ ಮಸೀದಿಯನ್ನು ಧ್ವಂಸ ಮತ್ತು ಆ ಸಂದರ್ಭದಲ್ಲಿ 3,000 ಜನರನ್ನು ಸಾವಿಗೆ ಕಾರಣವಾಗಿ ಗಲಬೆಗೆ ಪಿತೂರಿ ಮತ್ತು ಪ್ರಚೋದೆನೆಯ ಆರೋಪವಿತ್ತು.
28 ವರ್ಷಗಳಿಂದ ವಿಚಾರಣೆಯಲ್ಲಿದ್ದ ಈ ಪ್ರಕರಣಗಳ ವಿಚಾರಣೆಯನ್ನು ಸೆಪ್ಟೆಂಬರ್ 30 ರೊಳಗೆ ಪೂರ್ಣಗೊಳಿಸಿ, ತೀರ್ಪನ್ನು ನೀಡಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಹೇಳಿತ್ತು.
ಈ ಹಿನ್ನೆಲೆಯಲ್ಲಿ ಇಂದು ತೀರ್ಪು ನೀಡಿರುವ ಸಿಬಿಐ ವಿಶೇಷ ನ್ಯಾಯಾಲಯ ಪ್ರಕರಣದ 32 ಆರೋಪಿಗಳು ದೋಷಮುಕ್ತ ಎಂದು ಹೇಳಿದೆ.
ಕಳೆದ ನವೆಂಬರ್‌ನಲ್ಲಿ ಸುಪ್ರೀಂಕೋರ್ಟ್ ರಾಮ್ ಜನ್ಮಭೂಮಿ ಪ್ರಕರಣದ ತೀಪೂ ನೀಡಿದ್ದು, ದೇವಾಲಯ ನಿರ್ಮಿಸಲು ಆದೇಶಿಸಿತ್ತು. ಈಗಾಗಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಗಳು ಆರಂಭವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ನಡೆದ ಭೂಮಿಪೂಜೆ ಸಮಾರಂಭದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: ಭೂ ಸುಧಾರಣಾ ಮಸೂದೆಗೆ ಪರಿಷತ್‌ನಲ್ಲಿಲ್ಲ ಅಂಗೀಕಾರ: ಬಿಜೆಪಿ-ಜೆಡಿಎಸ್ ಮೈತ್ರಿ ಸಾಧ್ಯತೆ?