ಹತ್ರಾಸ್‌ ಅತ್ಯಾಚಾರ ಸಂತ್ರಸ್ತೆ ಸಾವು! ಯೋಗಿ ಸರ್ಕಾರದ ರಾಜೀನಾಮೆಗೆ ವಿರೋಧ ಪಕ್ಷಗಳ ಒತ್ತಾಯ!

ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನಿನ್ನೆ(ಮಂಗಳವಾರ) ಸಾವನ್ನಪ್ಪಿದ್ದಾರೆ. ಸೆಪ್ಟೆಂಬರ್ 14 ರಂದು ಬಾಲಕಿಯನ್ನು 4 ಜನ ಕಾಮ ಪಿಪಾಸುಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ನಾಲ್ಕೂ ಆರೋಪಿಗಳು ಈಗ ಪೊಲೀಸ್ ವಶದಲ್ಲಿದ್ದಾರೆ. ಆದರೆ, ಹತ್ರಾಸ್ ಪೊಲೀಸರು ಎಫ್‌ಐಆರ್‌ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಬಗ್ಗೆ ಉಲ್ಲೇಖಿಸಿಲ್ಲ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಹೀಗಾಗಿ ಅತ್ಯಾಚಾರ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.

ಸಂತ್ರಸ್ತೆಯ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಭೀಮ್ ಸೇನಾ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ನಿನ್ನೆ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಭೇಟಿಕೊಟ್ಟಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂತ್ರಸ್ಥೆಯ ಕುಟುಂಬದೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಭೇಟಿಯಾಗುವುದಾಗಿ ಭರವಸೆ ನೀಡಿದ್ದರು.

UP Hathras Gangrape: UP Woman, Gang-Raped And Tortured 2 Weeks Ago, Dies In Delhi Hospital

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಅತ್ಯಾಚಾರಕ್ಕೆ ಬಲಿಯಾದ 19 ವರ್ಷದ ಬಾಲಕಿ ದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಅತ್ಯಾಚಾರಿಗಳು ಸಂತ್ರಸ್ತ ಬಾಲಕಿಯ ನಾಲಿಗೆಯನ್ನು ಕತ್ತರಿಸಿ, ದೌರ್ಜನ್ಯ ಎಸಗಿದ್ದಾರೆ. ಯುಸಿ ಸರ್ಕಾರ ಹೆಣ್ಣುಮಕ್ಕಳ ರಕ್ಷಣೆಯಲ್ಲಿ ವಿಫಲವಾಗಿದೆ. ಹೆಣ್ಣು ಮಕ್ಕಳ ಮೇಲೆ ಯುಪಿಯಲ್ಲಿ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಹಿನ್ನಲೆಯಲ್ಲಿ ಎಲ್ಲ ವಿರೋಧ ಪಕ್ಷಗಳು ಮತ್ತು ದಲಿತ ಸಂಘಟನೆಗಳು ಭಾರತ್ ಬಂದ್‌ಗೆ ಕರೆಯಬೇಕು ಎಂದು ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.

ಕೇಜ್ರಿವಾಲ್ ಸರ್ಕಾರದ ದೆಹಲಿ ಸಚಿವ ರಾಜೇಂದ್ರ ಪಾಲ್ ಗೌತಮ್, “ಜಂಗಲ್ ರಾಜ್, ಸಿಎಂ ಯೋಗಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಹತ್ರಾಸ್ ಅತ್ಯಾಚಾರ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಸಬೇಕು. ಸಂತ್ರಸ್ತೆಯ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು ಮತ್ತು 1 ಕೋಟಿ ಪರಿಹಾರವನ್ನು ನೀಡಬೇಕು. 2 ತಿಂಗಳಲ್ಲಿ ಚಾರ್ಜ್‌ಶೀಟ್ ಫೈಲ್‌ ಮಾಡಿ, ಅಪರಾಧಿಗಳನ್ನು 6 ತಿಂಗಳ ಅವಧಿಯಲ್ಲಿ ಗಲ್ಲಿಗೇರಿಸಬೇಕು” ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಹತ್ರಾಸ್ ಅತ್ಯಾಚಾರ ಪ್ರಕರಣ : ‘ಅಪರಾಧಿಗಳನ್ನು ಗಲ್ಲಿಗೇರಿಸಬೇಕು’ ಅರವಿಂದ್ ಕೇಜ್ರಿವಾಲ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights