NLSIUನಲ್ಲಿ ಸ್ಥಳೀಯರಿಗೆ 25% ಮೀಸಲಾತಿ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿದ ಹೈಕೋರ್ಟ್‌!

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ(NLSIU)ಯಲ್ಲಿ ಸ್ಥಳೀಯರಿಗೆ ಶೇ.25 ಮೀಸಲಾತಿ ನೀಡುವ ವಿಧೇಯಕವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ರಾಜ್ಯದಲ್ಲಿರುವ ರಾಷ್ಟ್ರೀಯ ಕಾನೂನು ಶಾಲೆಗಳಲ್ಲಿ ಸ್ಥಳೀಯರಿಗೆ ಶೇ 25 ಮೀಸಲಾತಿ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ರಾಷ್ಟ್ರೀಯ ಕಾನೂನು ಶಾಲೆ ತಿದ್ದುಪಡಿ ಕಾಯಿದೆಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ರಾಜ್ಯದ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಮೀಸಲಾತಿ ಕಲ್ಪಿಸುವ 2020ರ ಭಾರತೀಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ತಿದ್ದುಪಡಿ ಕಾಯಿದೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿದ್ದವು.

ಎನ್‌ಎಲ್‌ಎಸ್‌ಐಯುನಲ್ಲಿ ಸೀಟು ಪಡೆಯಲು ಮೀಸಲಾತಿ ಕಾಯಿದೆ ಅಡ್ಡಿಯಾಗಲಿದೆ ಎಂದು ವಕೀಲ ಸಿ ಕೆ ನಂದಕುಮಾರ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದರು. ಭಾರತೀಯ ವಕೀಲರ ಪರಿಷತ್ತು (ಬಿಸಿಐ) ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಅರ್ಜಿ ಸಲ್ಲಿಸಿತ್ತು. ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಬಿ ವಿ ನಾಗರತ್ನ ಮತ್ತು ನ್ಯಾ. ರವಿ ಹೊಸಮನಿ ಅವರಿದ್ದ ವಿಭಾಗೀಯ ಪೀಠವು ತಿದ್ದುಪಡಿಗೆ ತಡೆ ನೀಡಿದೆ.

ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ಕಾಲ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ಎನ್‌ಎಲ್‌ಎಸ್‌ಐಯುನಲ್ಲಿ ಶೇ.25 ರಷ್ಟುಮೀಸಲಾತಿ ನೀಡಲು ರಾಜ್ಯ ವಿಧಾನಸಭೆಯು ಕಳೆದ ಮಾರ್ಚ್ ತಿಂಗಳಿನಲ್ಲಿ ಎನ್‌ಎಲ್‌ಎಸ್‌ಐಯು (ತಿದ್ದುಪಡಿ) ಕಾಯ್ದೆ 2020 ಅನ್ನು ಅಂಗೀಕರಿಸಿತು. ಮೇ ತಿಂಗಳಲ್ಲಿ ರಾಜ್ಯಪಾಲರ ಅಂಗೀಕಾರ ಪಡೆದಿತ್ತು.

ಆದರೆ, ತಿದ್ದುಪಡಿ ಕಾಯ್ದೆಯ ವಿರುದ್ಧ ಕಾನೂನು ವಿದ್ಯಾರ್ಥಿಗಳು ಹಾಗೂ ವಕೀಲರು ಕೋರ್ಟ್‌ ಮೊರೆಹೋಗಿದ್ದರು. ವಿಚಾರಣೆ ನಡೆಸಿರುವ ಹೈಕೋರ್ಟ್‌, ವಿಧೇಯಕವನ್ನು ರದ್ದುಗೊಳಿಸಿದೆ.


ಇದನ್ನೂ ಓದಿ: ನ್ಯಾಷನಲ್‌ ಲಾ ಸ್ಕೂಲ್‌ನಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇ.25 ಮೀಸಲಾತಿ: ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights