ಬಾಬರಿ ಮಸೀದಿ ತೀರ್ಪಿನ ವಿರುದ್ಧ ಹೈಕೋರ್ಟ್ ಮಟ್ಟಿಲೇರಲು ಮುಸ್ಲಿಂ ಸಂಘಟನೆ ನಿರ್ಧಾರ!
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್.ಕೆ.ಅಡ್ವಾಣಿ ಸೇರಿದಂತೆ 32 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ದೋಷಮುಕ್ತ ಎಂದು ತೀರ್ಪು ನೀಡಿದೆ. ಕೋರ್ಟ್ ತೀರ್ಪಿನ ಬಗ್ಗೆ ಮುಸ್ಲಿಂ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮೇಲ್ಮನವಿ ಸಲ್ಲಿಸಲು ನಿರ್ಧರಿಸಿವೆ..
ಸಿಬಿಐ ವಿಶೇಷ ನ್ಯಾಯಾಧೀಶರಾದ ಎಸ್.ಕೆ.ಯಾದವ್ ಅವರು ಇಂದು ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ. ಅವರ ತೀರ್ಪನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಆಲ್ ಇಂಡಿಯಾ ಮುಸ್ಲಿಂ ಲಾ ಬೋರ್ಡ್) ಖಂಡಿಸಿದೆ. ಆದ್ದರಿಂದ ಪ್ರಕರಣದ ತೀರ್ಪಿನ ಕುರಿತು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಬಾಬರಿ ಕ್ರಿಯಾ ಸಮಿತಿಯ ಸಂಚಾಲಕ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಜಫರ್ಯಾಬ್ ಜಿಲಾನಿ ನಾವು ಕೋರ್ಟ್ ತೀರ್ಪಿನಿಂದ ತೃಪ್ತರಾಗಿಲ್ಲ. ಹಾಗಾಗಿ, ತೀರ್ಪಿನ ಪೂರ್ಣ ಸಾರಾಂಶವನ್ನು ಕೂಲಂಕುಷವಾಗಿ ಓದಿ ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ಪ್ರಕರಣ: ಎಲ್ಲಾ ಆರೋಪಿಗಳು ದೋಷಮುಕ್ತ!