ಭಾರತದಲ್ಲಿ ಕೊರೊನಾ ಪ್ರಕರಣ ಹೆಚ್ಚಳದ ಮಧ್ಯೆ ಸುಧಾರಣೆ ಕಂಡ ಚೇತರಿಕೆ ದರ!

ಭಾರತದಲ್ಲಿ ಕೊರೊನಾವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿವೆ. ಈ ನಡುವೆ ಕೊಂಚ ನೆಮ್ಮದಿಯ ವಿಚಾರ ಏನೆಂದರೆ ಕೊರೊನಾ ಚೇತರಿಕೆ ದರದಲ್ಲೂ ಸುಧಾರಣೆ ಕಂಡಿದೆ. ದೇಶ ವಿಶ್ವದಲ್ಲಿ ಅತ್ಯಂತ ಕಡಿಮೆ ಸಾವಿನ ಪ್ರಮಾಣವನ್ನು ಹೊಂದಿದೆ. ದೇಶದಲ್ಲಿ ಒಟ್ಟು 63 ಲಕ್ಷ ಪ್ರಕರಣಗಳಿದ್ದು ಒಟ್ಟು ಪ್ರಕರಣಗಳ ವಿಷಯದಲ್ಲಿ ಭಾರತ ಯುಎಸ್ ನಂತರ ಎರಡನೇ ಸ್ಥಾನದಲ್ಲಿದೆ. ಭಾರತದಲ್ಲಿ ದೈನಂದಿನ ಪ್ರಕರಣಗಳು ಈ ಸಮಯದಲ್ಲಿ ಇತರ ದೇಶಗಳಿಗಿಂತ ವೇಗವಾಗಿ ಹೆಚ್ಚಾಗುತ್ತಿರುವುದು ಆತಂಕ ಸೃಷ್ಟಿಸಿದೆ.

ಮಾತ್ರವಲ್ಲದೇ ಮುಂಬರುವ ಚಳಿಗಾಲದ ತಿಂಗಳುಗಳಲ್ಲಿ ಭಾರತದಲ್ಲಿ ಕೋವಿಡ್ -19 ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಆದಾಗ್ಯೂ ಹೊಸ ಪ್ರಕರಣಗಳ ಸಂಖ್ಯೆಗೆ ಹೋಲಿಸಿದರೆ ದೇಶದ ಒಟ್ಟು ಚೇತರಿಕೆ ದರವೂ ಹೆಚ್ಚಿರುವುದರಿಂದ ಭಾರತದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಸರ್ಕಾರ ನಂಬಿದೆ.

ಅಕ್ಟೋಬರ್ 1 ರಿಂದ ಕೋವಿಡ್ -19 ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಲು ಕೇಂದ್ರ ನಿನ್ನೆ ತನ್ನ ‘ಅನ್ಲಾಕ್ 5.0’ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಇನ್ನೂ ಭಾರತದಲ್ಲಿ ಮಹಾಮಾರಿ ಕೊರೊನಾ ಹಾವಳಿ ಮುಂದುವರೆದಿದ್ದು ಒಂದೇ ದಿನದಲ್ಲಿ 86,821 ಜನ ಸೋಂಕಿಗೆ ಒಳಗಾಗಿದ್ದು, 1,181 ಮಂದಿ ಕೊರೊನಾಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಭಾರತದಲ್ಲಿ ಸಾವಿನ ಸಂಖ್ಯೆ 98,678ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಪತ್ತೆಯಾಗಿರುವ ಒಟ್ಟು 63,12,585 ಮಂದಿ ಸೋಂಕಿತರ ಪೈಕಿ 52,73,202 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 9,40,705 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights