ರಾಹುಲ್‌-ಪ್ರಿಯಾಂಕಾ ಸೇರಿ 200 ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲು!

ಅತ್ಯಾಚಾರ ಮತ್ತು ದೌರ್ಜನ್ಯಕ್ಕೆ ಬಲಿಯಾದ ಹತ್ರಾಸ್‌ ಯುವತಿಯ ಕುಟುಂಬಸ್ತರನ್ನು ಭೇಟಿ ಮಾಡಲು ಹೊರಟಿದ್ದ ಕಾಂಗ್ರೆಸ್  ಮುಖಂಡ ರಾಹುಲ್ ‌ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿದ್ದ ಪೊಲೀಸರು ಇಬ್ಬರ ವಿರುದ್ಧವೂ ಎಫ್‌ಐಆರ್  ದಾಖಲಿಸಿದ್ದಾರೆ.

ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದ ಮತ್ತು ಮಾಸ್ಕ್ ಧರಿಸದ ಕಾರಣಕ್ಕಾಗಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಸುಮಾರು 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಪೋಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Read Also: ಮಿತಿ ಮೀರಿದ ಯುಪಿ ಪೊಲೀಸರ ದುವರ್ತನೆ: ಟಿಎಂಸಿ ಸಂಸದೆಯನ್ನು ಎಳೆದಾಡಿದ ಪುರುಷ ಪೊಲೀಸರು!

ಭಾರತೀಯ ದಂಡ ಸಂಹಿತೆ ಸೆಕ್ಷನ್ 188(ಸಾರ್ವಜನಿಕ ಸೇವಕರಾಗಿ ಸರಿಯಾದ ಆದೇಶ ಪಾಲನೆ ಮಾಡದಿರುವುದು),  269 (ಕಾನೂನುಬಾಹಿರವಾಗಿ ಅಥವಾ ನಿರ್ಲಕ್ಷ್ಯದಿಂದ ಜೀವಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವುದು), 270 (ಜೀವಕ್ಕೆ ಅಪಾಯಕಾರಿ ರೋಗದ ಸೋಂಕನ್ನು ಹರಡುವ ಸಾಧ್ಯತೆ) ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3 ರ ಅಡಿಯಲ್ಲಿ ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

“ಕಾಂಗ್ರೆಸ್‌ನ ಕೆಲವು ಕಾರ್ಯಕರ್ತರು ಹಲ್ಲೆ ನಡೆಸಿದ ಕಾರಣ ಮಹಿಳಾ ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದಾರೆ. ಅಲ್ಲದೆ ಓರ್ವ ಮಹಿಳಾ ಪೊಲೀಸ್‌ ಸಿಬ್ಬಂಧಿಯ ಸಮವಸ್ತ್ರ ಹರಿದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ರಾಹುಲ್‌ಗಾಂಧಿ ಮೇಲೆ ಹಲ್ಲೆ- ಪ್ರಜಾಪ್ರಭುತ್ವದ ಮೇಲಿನ ಗ್ಯಾಂಗ್‌ರೇಪ್‌: ಸಂಜಯ್‌ ರಾವತ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights