ಐಎಎಸ್‌ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್‌ ಸೇರ್ಪಡೆ: RRನಗರದಲ್ಲಿ ಸ್ಪರ್ಧಿಸುವ ಸಾಧ್ಯತೆ!

ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಇಂದು ಕಾಂಗ್ರಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರ ಸೇರ್ಪಡೆ ಉಪಚುನಾವಣೆಯ ಸುತ್ತ ಸಂಚಲನ ಮೂಢಿಸಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಕುಸುಮಾ ಅವರು ಸೇಪರ್ಡೆಗೊಂಡಿದ್ದಾರೆ. ಅಲ್ಲದೆ, ರಾಜರಾಜಶ್ವರಿ ವಿಧಾನಸಭಾ ಉಪಚುನಾವಣೆಗೆ ಇವರೇ ಅಭ್ಯರ್ಥಿಯಾಗುವ ಸಾಧ್ಯತೆಯೂ ಹೆಚ್ಚಾಗಿದೆ.

ಕಳೆದ ಕೆಲವು ದಿನಗಳ ಹಿಂದೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ರಾಜಾರಾಜೇಶ್ವರಿನಗರ ಕ್ಷೇತ್ರದಲ್ಲಿ ಸರ್ಪ್ರೈಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಹೇಳಿದ್ದರು. ಅವರ ಹೇಳಿಕೆಗೂ ಕುಸುಮಾ ಅವರ ಸೇರ್ಪಡೆಗೂ ತಾಳೆಹಾಕಲಾಗುತ್ತಿದೆ. ಅಲ್ಲದೆ, ಕಾಂಗ್ರೆಸ್‌ ಒಳಗೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಉಪಚುನಾವಣೆ: ತೂಗುಗತ್ತಿ ಮೇಲೆ ಬಿಎಸ್‌ವೈ; ಡಿಕೆಶಿಗೆ ಸವಾಲು, ಹೆಚ್‌ಡಿಕೆಗೆ ಪ್ರತಿಷ್ಠೆ!

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಅವರನ್ನು ಸೋಲಿಸಲು ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಸೂಕ್ತ ಎಂದು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಕುಸುಮಾ ಅವರ ತಂದೆ ಹನುಮಂತರಾಯಪ್ಪ ಬಹಳ ವರ್ಷ ಕಾಂಗ್ರೆಸ್‍ನಲ್ಲಿದ್ದವರು. ನಗರಸಭೆ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಆದರೆ, ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡದ ಕಾರಣ ಕಾಂಗ್ರೆಸ್‌ ತೊರೆದಿದ್ದರು.

ನವೆಂಬರ್ 03 ರಂದು ಆರ್‌ಆರ್‌ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಕುಸುಮಾ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದು, ಇಂದು ಕುಸುಮಾ ಅವರು ಕಾಂಗ್ರೆಸ್‌ ಸೇರಿದ್ದಾರೆ.

ಇದನ್ನೂ ಓದಿ: ಆರ್‌ಆರ್‌ನಗರದಲ್ಲಿ ರಾಹುಲ್‌ಗಾಂಧಿಯೇ ಸ್ಪರ್ಧಿಸಿದರೂ ಗೆಲುವು ಬಿಜೆಪಿಗೆ: ಎಸ್‌ಟಿ ಸೋಮಶೇಖರ್‌

ಅಲ್ಲದೆ, ಆರ್‌ಆರ್‌ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆಗಾಗಿ ಸಮಿತಿ ರಚಿಸಲಾಗಿದ್ದು, ಟಿಕೆಟ್ ಆಕಾಂಕ್ಷಿಗಳ ಸಾಮಥ್ರ್ಯ, ಜನಪ್ರಿಯತೆ, ವಿದ್ಯಾಭ್ಯಾಸ, ಸಂಘಟನಾತ್ಮಕ ಹಿನ್ನೆಲೆ ಸೇರಿದಂತೆ ವಿವಿಧ ದೃಷ್ಟಿಕೋನಗಳಿಂದ ಪರಿಶೀಲನೆ ನಡೆಸಿ ಇಂದು(ಭಾನುವಾರ) ವರದಿ ನೀಡಲಿದೆ. ವರದಿಯ ಆಧಾರದಲ್ಲಿ ಸಂಭವನೀಯ ಅಭ್ಯರ್ಥಿಯ ಹೆಸರನ್ನು ಹೈಕಮಾಂಡ್‌ಗೆ ಕಳಿಸಲಾಗುವುದು ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ಸಂಭವನೀಯ ಅಭ್ಯರ್ಥಿ ಪಟ್ಟಿಯಲ್ಲಿ ಡಿಕೆ ರವಿ ಪತ್ನಿ ಕುಸುಮಾ ಅವರ ಹೆಸರು ಮೊದಲಿರಲಿದೆ ಎಂದು ಹೇಳಲಾಗಿದ್ದು, ಇವರಲ್ಲದೆ, ಟಿಕೆಟ್‌ ಆಕಾಂಕ್ಷಿಗಳಾಗಿ ಈ ಹಿಂದೆ ಸ್ಪರ್ಧೆ ಮಾಡಿದ್ದ ಪಿ.ಎನ್.ಕೃಷ್ಣಮೂರ್ತಿ, ಮಾಜಿ ಸಚಿವ ಎಂ.ಆರ್.ಸೀತಾರಂ ಅವರ ಪುತ್ರ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್‍ನ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರಕ್ಷಾರಾಮಯ್ಯ, ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರ ಪುತ್ರ ವೆಂಕಟೇಶ್ ಬಾಬು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ ಮುಂತಾದವರು ಸೇರಿ ಅಭ್ಯರ್ಥಿಯ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಕುಸುಮಾ ಅವರು ಚುನಾವಣೆಯಲ್ಲಿ ತನ್ನ ಮಗನ ಹೆಸರು ಹೇಳಿ ಮತ ಕೇಳಬಾರದು. ಚುನಾವಣೆ ಸಮಯದಲ್ಲಿ ಡಿಕೆ ರವಿ ಅವರ ಹೆಸರು ಬಳಸಿದರೆ ನಾನು ಸುಮ್ಮನಿರುವುದಿಲ್ಲ ಎಂದು ಡಿಕೆ ರವಿ ಅವರ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಿಎಸ್‌ವೈ ಪುತ್ರ ವಿಜಯೇಂದ್ರ ವಿರುದ್ಧ FIR ದಾಖಲಿಸದ DCP ವಿರುದ್ಧ ದೂರು ದಾಖಲು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights