ಅತ್ಯಾಚಾರಕ್ಕೆ ಬಾಲಕಿ ವಿರೋಧ: ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮನೆ ಮಾಲೀಕ!

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಅತ್ಯಾಚಾರಕ್ಕೆ ಬಲಿಯಾದ ಸಂತ್ರಸ್ತೆ ಸಾವಿನ ನಂತರ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ದಿನನಿತ್ಯ ವರದಿಯಾಗುತ್ತಲೇ ಇವೆ. ನಿನ್ನೆ (ಸೋಮವಾರ) ತನ್ನ ಮೇಲಾದ ಅತ್ಯಾಚಾರದ ಬಗ್ಗೆ ದೂರು ನೀಡಲು ಯುವತಿಯೊಬ್ಬರು 900 ಕಿ.ಮೀ ದೂರ ಸಂಚರಿಸಿ ದೂರು ನೀಡಿದ್ದಾರೆ. ಇಂತಹ ಅಮಾನವೀಯ ಘಟನೆಗಳ ನಡುವೆ ತೆಲಂಗಾಣದಲ್ಲಿ ಮನೆ ಮಾಲೀಕನೊಬ್ಬ ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಮನೆಗೆಲಸದ ಬಾಲಕಿಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿದೆ.

ಸೆ. 18 ರಂದು ತೆಲಂಗಾಣದ ಖಮ್ಮಂ ಜಿಲ್ಲೆಯ ಮನೆ ಮಾಲಿಕನೊಬ್ಬ ತನ್ನ ಮೆನಯಲ್ಲಿ ಕೆಲಸಕ್ಕಿದ್ದ 13 ವರ್ಷದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆಕೆ ವಿರೋಧಿಸಿದ್ದು, ಕೋಪಗೊಂಡ ಮಾಲೀಕ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಬೆಂಕಿಯ ಉರಿಗೆ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದಳು. ಹೆದರಿದ ಮನೆ ಮಾಲೀಕ ತಾನೇ ಖುದ್ದಾಗಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ. ಮೈಮೇಲೆ ಸಾಕಷ್ಟು ಭಾಗಗಳಲ್ಲಿ ಸುಟ್ಟ ಗಾಯಗಳಾಗಿತ್ತು. ಬಳಿಕ ಆಕೆಯನ್ನು ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲದೆ, ಬಾಲಕಿಯ ತಂದೆ-ತಾಯಿಗೆ ಇದು ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಗೆ ಬಾಲಕಿ ಸಿಲುಕಿಕೊಂಡಿದ್ದಳು ಎಂದು ನಂಬಿಸಿದ್ದ.

ಘಟನೆಯಲ್ಲಿ ಬಾಲಕಿಯ ಆಕೆಯ ದೇಹ ಶೇ. 70ರಷ್ಟು ಸುಟ್ಟುಹೋಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಸೋಮವಾರ ಪೊಲೀಸರಿಗೆ ಘಟನೆ ಬಗ್ಗೆ ವಿವರಿಸಿದ್ದು, ಮನೆ ಮಾಲೀಕ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ನಾವು ವಿರೋಧ ವ್ಯಕ್ತಪಡಿಸಿದ್ದಕ್ಕೆ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಎಂದು ಹೇಳಿದ್ದಾಳೆ. ಬಾಲಕಿಯ ಹೇಳಿಕೆ ಆಧಾರ ಮೇಲೆ ಮನೆ ಮಾಲೀಕನನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ದಲಿತ ಶಾಸಕನ ಅಂತರ್ಜಾತಿ ವಿವಾಹ: ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ತಂದೆ ವಿರುದ್ಧ FIR

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights