ಬಿಜೆಪಿ ನಾಯಕರ ಮೇಲೆ ಸಿಬಿಐ ದಾಳಿ ಯಾಕೆ ಮಾಡುತ್ತಿಲ್ಲ: ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ಮನೆ ಮೇಲಿನ ದಾಳಿ ದುರುದ್ದೇಶದಿಂದ ಕೂಡಿದೆ. ಅದರ ಹಿಂದೆ ಬೇರಾವ ಪ್ರಕರಣಗಳ ಹಿನ್ನೆಲೆಯೂ ಇಲ್ಲ. ಕಾಂಗ್ರೆಸ್‌ ಮುಖಂಡ ಮೇಲೆ ಮಾತ್ರ ಸಿಬಿಐ ದಾಳಿಗಳಾಗುತ್ತಿವೆ. ಬಿಜೆಪಿಯವರ ಮೇಲೆ ಸಿಬಿಐ ಯಾಕೆ ದಾಳಿ ಮಾಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷದವರು ಮಾತ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ.. ಅಕ್ರಮದಲ್ಲಿ ತೊಡಗಿದ್ದಾರೆ ಎಂಬುದಾಗಿ ಸಿಬಿಐ ದಾಳಿ ನಡೆಸುತ್ತಿದೆಯಲ್ಲಾ.. ಯಾಕೆ ಬಿಜೆಪಿಯವರು ಭ್ರಷ್ಟಾಚಾರ, ಅಕ್ರಮ ಹಣ ಸಂಪಾದನೆಯನ್ನೇ ಮಾಡ್ತಾ ಇಲ್ವಾ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯವರು ಹೇಳೋದು ಬರೀ ವೇದಾಂತ ಅಷ್ಟೇ.. ಉಪ ಚುನಾವಣೆಯ ಸಂದರ್ಭದಲ್ಲಿಯೇ ಡಿಕೆ ಶಿವಕುಮಾರ್ ಮನೆಯ ಮೇಲೆ ಸಿಬಿಐ ದಾಳಿ ಮಾಡಿದ್ದು ರಾಜಕೀಯ ದುರುದ್ದೇಶದಿಂದಲೇ ಆಗಿದೆ. ಉಪ ಚುನಾವಣೆ ಸಂದರ್ಭದಲ್ಲಿಯೇ ಕಾಂಗ್ರೆಸ್ ನಾಯಕರನ್ನು ಯಾಕೆ ಟಾರ್ಗೆಟ್ ಮಾಡಬೇಕು ಎಂದು ಬಿಜೆಪಿ ಸಿಬಿಐಗೆ ಒತ್ತಡ ಹೇರುತ್ತಿದೆ ಎಂದು ಹೇಳಿದ್ದಾರೆ.

ಸಿಬಿಐ ದಾಳಿ ಬಗ್ಗೆ ಟ್ವೀಟ್‌ ಮಾಡಿರುವ ಸಂಸದ ಡಿಕೆ ಸುರೇಶ್‌,  ಅಧಿಕಾರಿಗಳ ದಾಖಲೆ ಪರಿಶೀಲನೆಯಲ್ಲಿ ನನ್ನ ಮತ್ತು ನನ್ನ ಅಣ್ಣನ ಮನೆಯಿಂದ ಸೇರಿ ಒಟ್ಟು 6.78 ಲಕ್ಷ ರೂಪಾಯಿಗಳು ಸಿಕ್ಕಿದೆ. ಆದ್ರೆ, ಸಿಬಿಐ ಅಧಿಕಾರಿಗಳು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ಒಟ್ಟು 57 ಲಕ್ಷ ಸಿಕ್ಕಿದ ಮಾಹಿತಿ ಕೊಟ್ಟಿದ್ದಾರೆ. ಇದರಲ್ಲಿ ಬಾಕಿ 50.22 ಲಕ್ಷ ಹಣ ಎಲ್ಲಿ ಸಿಕ್ಕಿದೆ, ಅದರ ಹಿನ್ನೆಲೆ ಏನು ಎಂಬುದನ್ನ ಅಧಿಕಾರಿಗಳೇ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸಗೊಳಿಸಲು ಯಾರೂ ಸಂಚು ಮಾಡಿಲ್ಲ ಎನ್ನಲು ಕೋರ್ಟ್‌ ಕೊಟ್ಟ 10 ಕಾರಣಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights