ತಮಿಳು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾಗೆ ಸೇರಿದ 2,000 ಕೋಟಿ ಮೌಲ್ಯದ ಆಸ್ತಿ ಜಪ್ತಿ!

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಸೇರಿರುವ ವಿಕೆ ಶಶಿಕಲಾ ಅವರಿಗೆ ಸೇರಿದ 2,000 ಕೋಟಿ ರೂ ಮೌಲ್ಯದ ಆಸ್ತಿಯನ್ನು ಆದಾಯ ತೆರಿಗೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತ ಅವರ ಆಪ್ತೆ ಶಶಿಕಲಾ ಅವರಿಗೆ ಸೇರಿದ ಆಸ್ತಿಯನ್ನು ಬೇನಾಮಿ ಆಸ್ತಿ ತಡೆ ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಸಿರುಥಾವೂರ್ ಮತ್ತು ಕೊಡನಾಡುವಿನಲ್ಲಿರುವ 300 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಇಂದು (ಬುಧವಾರ)  ಜಪ್ತಿ ಮಾಡಲಾಗಿದೆ. ಈ ಆಸ್ತಿಗಳು ಶಶಿಕಲಾ, ಇಳವರಸಿ ಮತ್ತು ಸುಧಾಕರನ್ ಹೆಸರಿನಲ್ಲಿವೆ ಎಂದು ಆದಯ ತೆರಿಗೆ ಇಲಾಖೆ ಹೇಳಿದೆ.

ಒಟ್ಟು 2,000 ಕೋಟಿ ರೂ ಮೌಲ್ಯದ ಆಸ್ವತ್ತನ್ನು ಜಪ್ತಿ ಮಾಡಲಾಗಿದ್ದು, ಜಪ್ತಿ ಮಾಡಿದ ಆಸ್ತಿಗಳ ಮೇಲೆ ಐಟಿ ಇಲಾಖೆಯ ಬೇನಾಮಿ ನಿಷೇಧ ದಳ ಮುಟ್ಟುಗೋಲು ನೋಟಿಸ್ ಹಾಕಿದೆ.

2017ರಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮಿಳುನಾಡು, ಪುದುಚೇರಿಯಲ್ಲಿ ಶಶಿಕಲಾ ಹಾಗೂ ಅವರ ಪತಿ ನಟರಾಜನ್, ಸಂಬಂಧಿಗಳಿಗೆ ಸೇರಿದ್ದ ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ 1,500 ಕೋಟಿ ರೂಪಾಯಿ ಆದಾಯ ತೆರಿಗೆ ವಂಚನೆ ಪತ್ತೆಯಾಗಿತ್ತು. ಅಲ್ಲದೇ 7 ಕೋಟಿ ರೂಪಾಯಿ ನಗದು, 5 ಕೋಟಿ ಮೌಲ್ಯದ ಆಭರಣಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ 2021ರ ಜನವರಿ 27 ರಂದು ಬಿಡುಗಡೆಯಾಗಲಿದ್ದಾರೆ.


Read Also: ಮೋದಿಯವರೇ ಸುರಂಗದಲ್ಲಿ ಕೈ ಬೀಸುವುದನ್ನು ನಿಲ್ಲಿಸಿ; ದೇಶದ ಜನರ ಪ್ರಶ್ನೆಗಳಿಗೆ ಉತ್ತರಿಸಿ: ರಾಹುಲ್‌ಗಾಂಧಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights