ದೇಶದಲ್ಲಿ ಅತ್ಯಾಚಾರ, ಕೊಲೆ, ದೌರ್ಜನ್ಯ ಹೆಚ್ಚಾಗಿವೆ, ಚೌಕಿದಾರ ಎಲ್ಲಿದ್ದಾರೆ: ಸಿದ್ದರಾಮಯ್ಯ

ದೇಶದಲ್ಲಿ ಮಹಿಳೆಯರಿಗೆ, ಮಕ್ಕಳಿಗೆ, ದಲಿತರಿಗೆ ರಕ್ಷಣೆ ಇಲ್ಲ. ನಿತ್ಯ ಸಾವಿರಾರು ಕೊಲೆ, ಅತ್ಯಾಚಾರ, ಶೋಷಣೆಯ ಪ್ರಕರಣಗಳು ದಾಖಲಾಗ್ತಿವೆ. ಆದರೆ, ಇಂತಹ ಭೀರಕ ಸಂದರ್ಭದಲ್ಲಿ ಚೌಕಿದಾರ ಎಲ್ಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಹೆಣ್ಣೊಬ್ಬಳನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ. ಆಕೆಯ ಕುಟುಂಬದವರಿಗೂ ಶವವನ್ನು ನೋಡಲು ಅವಕಾಶ ನೀಡದೆ ಮಧ್ಯರಾತ್ರಿ ಪೊಲೀಸರೇ ಶವಸಂಸ್ಕಾರ ಮಾಡಿದ್ದಾರೆ. ಸರ್ಕಾರ ಅತ್ಯಾಚಾರಿಗೆ ಶಿಕ್ಷೆ ಕೊಡಿಸುವುದು ಬಿಟ್ಟು, ನೆರವಿಗೆ ನಿಂತಿದೆ ಅಂದ್ರೆ ಯೋಗಿ ಆದಿತ್ಯನಾಥ್‌ರಂಥವರು ಕಾವಿ ಬಟ್ಟೆಗೆ ಕಳಂಕವಲ್ಲದೆ ಇನ್ನೇನು?” ಎಂದು ಕಿಡಿಕಾರಿದ್ದಾರೆ.

ದೇಶದಲ್ಲಿ ಮಹಿಳೆಯರಿಗೆ, ಮಕ್ಕಳಿಗೆ, ದಲಿತರಿಗೆ ರಕ್ಷಣೆ ಇಲ್ಲ. ನಿತ್ಯ ಸಾವಿರಾರು ಕೊಲೆ, ಅತ್ಯಾಚಾರ, ಶೋಷಣೆಯ ಪ್ರಕರಣಗಳು ದಾಖಲಾಗ್ತಿವೆ. ಇವರಲ್ಲಿ ಎಷ್ಟು ಜನರಿಗೆ ನ್ಯಾಯ ಸಿಕ್ಕಿದೆ? ನಾನು ಚೌಕಿದಾರ್ ಅಂತ ಹೇಳಿ ಕುಣಿದಾಡ್ತಿದ್ದವರೆಲ್ಲ ಈಗ ಎಲ್ಲಿದ್ದಾರೆ? ಇದೇನಾ ನರೇಂದ್ರ ಮೋದಿ ಅವರ ಚೌಕಿದಾರಿಕೆ? ಎಂದು ಟ್ವೀಟ್‌ ಮಾಡಿದ್ದಾರೆ.

“ಯೋಗಿ ಆದಿತ್ಯನಾಥ್ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ಸೇರಿದಂತೆ 27 ಪ್ರಕರಣಗಳು ಇದ್ದವು. ಮುಖ್ಯಮಂತ್ರಿಯಾದ ಮೇಲೆ ಆ ಎಲ್ಲಾ ಪ್ರಕರಣಗಳನ್ನು ವಾಪಾಸು ಪಡೆಯುವಂತೆ ಮಾಡಿ, ಸಾತ್ವಿಕನಂತೆ ನಾಟಕ ಮಾಡುತ್ತಿದ್ದಾರೆ. ಇಂಥವರ ರಾಜ್ಯದಲ್ಲಿ ಜನಸಾಮಾನ್ಯರಿಗೆ ರಕ್ಷಣೆ ಸಿಗಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಐಟಿ, ಇಡಿ, ಸಿಬಿಐ ಇಲಾಖೆಗಳು ತಮ್ಮ ಕರ್ತವ್ಯ ತಾವು ಮಾಡುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಚುನಾವಣೆಗಳು ಹತ್ತಿರ ಬಂದಾಗ ವಿರೋಧಿಗಳನ್ನು ಹತ್ತಿಕ್ಕಲು ಐಟಿ, ಇಡಿ, ಸಿಬಿಐ ಗಳನ್ನು ದುರ್ಬಳಕೆ ಮಾಡಿಕೊಂಡು ದಾಳಿ ಮಾಡಿಸುವುದಕ್ಕಷ್ಟೇ ನಮ್ಮ ವಿರೋಧ. ಇಂತಹ ದಾಳಿ ಮೂಲಕ ನಮ್ಮ ಬಾಯಿ ಮುಚ್ಚಿಸಬಹುದು ಎಂದುಕೊಂಡಿದ್ದರೆ ಅದು ಬಿಜೆಪಿಯವರ ಭ್ರಮೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ಮೇಲೆ ಸಿಬಿಐ ದಾಳಿ ಯಾಕೆ ಮಾಡುತ್ತಿಲ್ಲ: ಸಿದ್ದರಾಮಯ್ಯ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights