ದಲಿತ ಯುವತಿ ಮೇಲೆ ಅತ್ಯಾಚಾರ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ!
19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ನಾಲ್ವರು ಅಪರಾಧಿಗಳಿಗೆ ರಾಜಸ್ಥಾನದ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ರಾಜಸ್ಥಾನದ ಅಥಾನಗಾಜಿ-ಅಲ್ವಾರ್ ಬೈಪಾಸ್‌ನಲ್ಲಿ 2019ರ ಏಪ್ರಿಲ್ 26 ರಂದು ತನ್ನ ಪತಿಯ ಜೊತೆ ತೆರಳುತ್ತಿದ್ದ ಯುವತಿಯ ಮೇಲೆ ಆಕೆಯ ಪತಿ ಎದುರೇ 4 ಮಂದಿ ಅತ್ಯಾಚಾರ ಎಸಗಿದ್ದರು. ಘಟನೆಯನ್ನು ವಿಡಿಯೋ ಮಾಡಿಕೊಂಡಿದ್ದ ಆರೋಪಿಗಳು ದೂರು ನೀಡಿದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿದ್ದರು. ಅಲ್ಲದೆ, ಹಣದ ಬೇಡಿಕೆ ಇಟ್ಟು ಬ್ಲಾಕ್‌ಮೇಲ್ ಮಾಡಿದ್ದ ಅರೋಪಿಗಳು ವಿಡಿಯೋವನ್ನು ವೈರಲ್ ಮಾಡಿದ್ದರು.
ಈ ಹಿನ್ನೆಲೆಯಲ್ಲಿ 2019 ರ ಮೇ 2 ರಂದು ಐವರ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿರುವ ವಿಶೇಷ ನ್ಯಾಯಾಲಯ, ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು (ದೌರ್ಜನ್ಯ ತಡೆ) ಕಾಯ್ದೆಯನ್ನು ಉಲ್ಲೇಖಿಸಿ ಆರೋಪಿಗಳಾದ ಚೋಟೇ ಲಾಲ್ (22), ಹನ್ಸ್‌ರಾಜ್ ಗುರ್ಜರ್ (20), ಅಶೋಕ್ ಕುಮಾರ್ ಗುರ್ಜರ್ (20) ಮತ್ತು ಇಂದ್ರಜ್ ಸಿಂಗ್ ಗುರ್ಜರ್ (22)ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಅಲ್ಲದೆ, ವಿಡಿಯೋ ಮಾಡಿದ್ದ ಐದನೇ ಆರೋಪಿ ಮುಖೇಶ್ ಗುರ್ಜರ್ (28)ಗೆ ಐಟಿ ಕಾಯ್ದೆಯಡಿ ಒಬ್ಬ ಅಪರಾಧಿಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ನೀಡಿದೆ.
ಇದನ್ನೂ ಓದಿ: ಅಂತರ್ಜಾತಿ ವಿವಾಹ: 29 ದಲಿತ ಕುಟುಂಬಗಳಿಗೆ ಊರಿನಿಂದ ಬಹಿಷ್ಕಾರ!

