ಭೀಮಾ ಕೋರೆಗಾಂವ್‌: ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನ: ವಿಡಿಯೋದಲ್ಲಿ ಅವರು ಹೇಳಿದ್ದೇನು?

ಭೀಮಾ ಕೋರೆಗಾಂವ್-ಎಲ್ಗರ್ ಪರಿಷತ್ ಪ್ರಕರಣದಲ್ಲಿ ಹಲವು ಹೋರಾಟಗಾರರನ್ನು ಬಂಧಿಸುತ್ತಿರುವ ರಾಷ್ಟ್ರೀಯ ತನಿಖಾ ಆಯೋಗ (NIA), 83 ವರ್ಷದ ಮಾನವ ಹಕ್ಕುಗಳ ಹೋರಾಟಗಾರ ಫಾದರ್‌ ಸ್ಟ್ಯಾನ್ ಸ್ವಾಮಿಯವರನ್ನು ಜಾರ್ಖಂಡ್‌ನ ರಾಂಚಿಯಲ್ಲಿ ಬಂಧಿಸಿದೆ.

ಕ್ಯಾಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ. ಸ್ಟ್ಯಾನ್ ಸ್ವಾಮಿ ಹಲವು ರೀತಿಯ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯಾಗಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸುಧಾ ಭಾರದ್ವಾಜ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್

ಎರಡು ದಿನಗಳ ಮೊದಲು ಸ್ಟಾನ್ ಸ್ವಾಮಿ ವಿಡಿಯೋ ಹೇಳಿಕೆ ನೀಡಿ, ತಮ್ಮ ಬಂಧನ ಸಾಧ್ಯತೆಯ ಬಗ್ಗೆ ಮಾಹಿತಿ ನೀಡಿದ್ದರು.

ಸ್ಟ್ಯಾನ್ ಸ್ವಾಮಿ ವಿಸ್ತಾಪನ್ ವಿರೋಧಿ ಜನವಿಕಾಸ್ ಆಂದೋಲನ್ (ವಿ.ವಿ.ಜೆ.ಎ) ಸಂಘಟನೆಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಅವರು ಜಾರ್ಖಂಡ್‌ನ ಅತ್ಯಂತ ಶ್ರೇಷ್ಠ ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ.


ಇದನ್ನೂ ಓದಿ: ದಲಿತ ಯುವತಿ ಮೇಲೆ ಅತ್ಯಾಚಾರ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights