ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ: ಶೇ.41 ವಿದ್ಯಾರ್ಥಿಗಳು ಪಾಸ್‌!

ಕೊರೊನಾ ನಡುವೆಯೂ ಪರೀಕ್ಷೆ ಬರೆದು ಫೇಲ್‌ ಆಗಿದ್ದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಬರೆದಿದ್ದು, ಪೂರಕ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆ ಬರೆದಿ ವಿದ್ಯಾರ್ಥಿಗಳಲ್ಲಿ ಶೇ. .41.28ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ರಾಜ್ಯಾದ್ಯಂತ ಒಟ್ಟು  2,12,678  ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆದಿದ್ದು, ಇವರ ಪೈಕಿ  87,784 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ

ಕಳೆದ ‌ ಸೆಪ್ಟೆಂಬರ್ 7 ರಿಂದ 19ರವರೆಗೆ ಒಟ್ಟು 305 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆದಿತ್ತು.

ಫಲಿತಾಂಶ http://www.karresults.nic.in ನಲ್ಲಿ ಪ್ರಕಟವಾಗಿದ್ದು ಈ ಪೂರಕ ಪರೀಕ್ಷೆಯಲ್ಲಿ ಸಹ ವಿದ್ಯಾರ್ಥಿಗಳಿಗೆ ಹೋಲಿಸಿದರೆ ವಿದ್ಯಾರ್ಥಿನಿಯರೇ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆಯಾಗಿದ್ದಾರೆ.

ಶೇ.45ರಷ್ಟು ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದರೆ  ಶೇ. 38.30ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತೀರ್ಣರಾಗಿದ್ದಾರೆ.

ಇದಲ್ಲದೆ ವಿಜ್ಞಾನ ವಿಭಾಗದಲ್ಲಿ ಶೇ.37.45, ವಾಣಿಜ್ಯ ವಿಭಾಗದಲ್ಲಿ ಶೇ.39.02 ಹಾಗೂ ಕಲಾ ವಿಭಾಗದಲ್ಲಿ ಶೇ.45.14 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಕನ್ನಡ ಮಾದ್ಯಮದಲ್ಲಿ ವ್ಯಾಸಂಗ ಮಾಡಿದ್ದ ಶೇ.45.41 ಹಾಗೂ ಆಂಗ್ಲ ಮಾದ್ಯಮದಲ್ಲಿ ವ್ಯಾಸಂಗ ಮಾಡಿದ್ದ ಶೇ.35.89 ವಿದ್ಯಾರ್ಥಿಗಳು ಈ ಬಾರಿ ತೇರ್ಗಡೆ ಹೊಂದಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights