ಶಾಲೆ ತೆರೆಯಿರಿ; ಪರೀಕ್ಷಾ ಮುಕ್ತ ವರ್ಷವೆಂದು ಘೋಷಿಸಿ: ಸರ್ಕಾರ ಮಕ್ಕಳ ಹಕ್ಕು ಆಯೋಗ ಶಿಫಾರಸು!

ಕೇಂದ್ರ ಸರ್ಕಾರದ ಆನ್‌ಲಾಕ್‌ 5 ಮಾರ್ಗಸೂಚಿಗಳಲ್ಲಿ ಶಾಲೆಗಳನ್ನು ತೆರೆಯಲು ಅವಕಾಶ ನೀಡಿದ್ದರೂ ರಾಜ್ಯ ಸರ್ಕಾರ ಶಾಲೆಗಳನ್ನು ತೆರೆಯಲು ಸಿದ್ದವಾಗಿಲ್ಲ. ಹಾಗಾಗಿ, ಮಕ್ಕಳ ಹಕ್ಕು ಆಯೋಗ (ಕರ್ನಾಟಕ)ವು ಶಾಲೆಗಳನ್ನು ಪುನಃ ಆರಂಭಿಸಲು ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೆ, 2020-21ರ ಶೈಕ್ಷಣಿಕ ವರ್ಷವನ್ನು ಪರೀಕ್ಷೆ ಮುಕ್ತ ವರ್ಷ ಎಂದು ಘೋಷಿಸಬೇಕು  ಎಂದು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಮಕ್ಕಳಲ್ಲಿ ಕೊರೊನಾ ವಿರುದ್ಧ ಹೋರಾಟುವ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ. ಶಾಲೆಗಳು ಆರಂಭವಾಗದಿದ್ದರೆ ಅನೇಕ ಕಡೆಗಳಲ್ಲಿ ಬಾಲ ಕಾರ್ಮಿಕತೆ, ಮಕ್ಕಳ ಸಾಗಾಟ ಮತ್ತು ಬಾಲ್ಯ ವಿವಾಹದಂತಹ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಶಾಲೆಗಳನ್ನು ತೆರೆಯಬೇಕು. ಶಾಲೆಗಳಲ್ಲಿ ಕೊರೊನಾ ಭಯಮುಕ್ತ ವಾತಾವರಣವನ್ನು ಸರ್ಕಾರ ನಿರ್ಮಿಸಬೇಕು ಎಂದು ಆಯೋಗವು ಸೂಚಿಸಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

30ಕ್ಕಿಂತ ಕಡಿಮೆ ಮಕ್ಕಳೊಂದಿಗೆ ಪ್ರಾಥಮಿಕ ಶಾಲೆಗಳಲ್ಲಿ ತರಗತಿಗಳನ್ನು ನಡೆಸಬೇಕು. 15 ದಿನಗಳವರೆಗೆ ಅರ್ಧ ದಿನ ಮಾತ್ರ ಬೋಧನೆ ಇರಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿರುವ ತರಗತಿಗಳಲ್ಲಿ ಹಂತ ಹಂತವಾಗಿ ಶಾಲೆಗಳನ್ನು ತೆರೆಯಬೇಕು. ಮಕ್ಕಳ ಶುಚಿತ್ವಕ್ಕೆ ಶಾಲೆಗಳಲ್ಲಿ ಮೂಲ ಸೌಕರ್ಯಗಳಿರಬೇಕು. ಕೊರೊನಾ ಸೋಂಕು ಹರಡುವ ಬಗ್ಗೆ ಶಾಲೆಗಳು ಮಕ್ಕಳಿಗೆ ಮತ್ತು ಪೋಷಕರಿಗೆ ಜಾಗೃತಿ ಮೂಡಿಸಬೇಕು ಎಂದು ಆಯೋಗ ಹೇಳಿದೆ.

11 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕರ್ತವ್ಯಕ್ಕೆ ಹಾಜರಾಗುವ ಮುನ್ನ ಶಿಕ್ಷಕರು ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡು ಬರಬೇಕು. ಶಾಲೆಗಳಲ್ಲಿ ಕೈ ತೊಳೆಯುತ್ತಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ರೂಢಿಸಿಕೊಳ್ಳಬೇಕು. ಪ್ರಾಥಮಿಕ, ಮಾಧ್ಯಮಿಕ, ಪ್ರೌಢಶಾಲಾ ಮಕ್ಕಳಿಗೆ ಪ್ರತ್ಯೇಕ ಶಿಷ್ಟಾಚಾರವನ್ನು ಹೊರಡಿಸಬೇಕು ಎಂದು ಆಯೋಗ ತಿಳಿಸಿದೆ.


ಇದನ್ನೂ ಓದಿ: ಯಡಿಯೂರಪ್ಪ ಸರ್ಕಾರ ಪತನವಾಗಲಿದೆ; ಮಧ್ಯಂತರ ಚುನಾವಣೆ ನಡೆಯಲಿದೆ: ಟಿಬಿ ಜಯಚಂದ್ರ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights