ಮೇವು ಹಗರಣ: ಲಾಲು ಪ್ರಸಾದ್ ಯಾದವ್‌ಗೆ ಜಾಮೀನು: ಲಾಲು ಭಾಗಿಯಾಗಿರುವ ಹಗರಣಗಳೆಷ್ಟು ಗೊತ್ತೇ?

ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಎದುರಾಗಿತ್ತಿದೆ. ಇದೇ ಸಂದರ್ಭದಲ್ಲಿ ಬಹುಕೋಟಿ ಮೇವು ಹಗರಣದ ಚಾಯ್‌ಬಾಸ್‌ ಅವ್ಯವಹಾರ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಆರ್‌ಸಿ 68 ಎ / 96 ಮತ್ತು ಆರ್‌ಸಿ 20 ಎ/96  ಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ.

1990ರ ದಶದಲ್ಲಿ ಚಾಯಿಬಾಸಾ ಖಜಾನೆಯಿಂದ 35.62 ಕೋಟಿ ಕಬಳಿಕೆಯ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಲಾಲೂ ಜೈಲು ಸೇರಿದ್ದರು. ಈಗಾಗಲೇ ಅರ್ಧದಷ್ಟು ಶಿಕ್ಷೆಯನ್ನು ಅನುಭವಿಸಿದ ಕಾರಣ ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಅವರ ಪೀಠವು ಲಾಲು ಅವರಿಗೆ ಎರಡು ಪ್ರಕರಣಗಳಲ್ಲಿ ಜಾಮೀನು ನೀಡಿದೆ. ತಲಾ 50,000 ರೂ.ಗಳ ಎರಡು ಜಾಮೀನು ಬಾಂಡ್‌ಗಳನ್ನು ಮತ್ತು 50,000 ರೂ.ಗಳ ಭದ್ರತಾ ಬಾಂಡ್‌ಅನ್ನು ನ್ಯಾಯಾಲಯದಲ್ಲಿ ಠೇವಣಿ ಇಡಬೇಕು ಎಂದು ಹೇಳಿದೆ.

ಲಾಲೂ ಅವರು ಜಾಮೀನು ಪಡೆದಿದ್ದರೂ ಜೈಲಿನಲ್ಲೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ನ್ಯಾಯಾಲಯವು ಮೇವು ಹಗರಣದ ಚಾಯಿಬಾಸಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡಿದೆ. ಆದರೆ, ದುಮ್ಕಾ ಖಜಾನೆ ಪ್ರಕರಣದ ವಿಚಾರಣೆ ಇನ್ನೂ ಬಾಕಿ ಇದೆ. ಹೀಗಾಗಿ ಅವರು ಜೈಲಿನಲ್ಲಿಯೇ ಇರಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದುಮ್ಕಾ ಖಜಾನೆ ಪ್ರಕರಣದ ವಿಚಾರಣೆಯ ಸಿಬಿಐ ಪರ ವಕೀಲರು ಅನಾರೋಗ್ಯದಿಂದ ಬಳಲುತ್ತಿರುವುದರಿಂದಾಗಿ ವಿಚಾರಣೆಯನ್ನು ಮುಂದಕ್ಕೆ ಹಾಕಲಾಗಿತ್ತು.

ಇದನ್ನೂ ಓದಿ: ಕಲ್ಲಿದ್ದಲು ಹಗರಣ: ಬಿಜೆಪಿ ಮಾಜಿ ಸಚಿವ ದಿಲೀಪ್‌ ರೇ ಅಪರಾಧಿ ಎಂದು ತೀರ್ಪಿತ್ತ ನ್ಯಾಯಾಲಯ!

ಬಹುಕೋಟಿ ಹಗರಣದಲ್ಲಿ ನಾಲ್ಕು ಪ್ರಕರಣಗಳಲ್ಲಿ ಲಾಲು ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿ, ಶಿಕ್ಷೆಗೊಳಪಡಿಸಿದೆ.  ಸೆಪ್ಟೆಂಬರ್ 30, 2013 ರಂದು (ಆರ್‌ಸಿ 20 ಎ / 96) ಚೈಬಾಸ ಖಜಾನೆ, 2018 ರ ಜನವರಿ 24 ರಂದು ಮತ್ತೊಂದು ಚೈಬಾಸ ಖಜಾನೆ (ಆರ್‌ಸಿ 68 ಎ / 96) , ಫೆಬ್ರವರಿ 23, 2018 ರಂದು ದಿಯೋಘರ್ ಖಜಾನೆ (ಆರ್‌ಸಿ 64 ಎ / 96) ಮತ್ತು ಫೆಬ್ರವರಿ 19 ರಂದು ಡುಮ್ಕಾ ಖಜಾನೆ (ಆರ್‌ಸಿ 38 ಎ / 96) ಅವ್ಯವಹಾರ ಪ್ರಕರಣಗಳಲ್ಲಿ ಲಾಲು ಅಪರಾಧಿ ಎಂದು ಘೋಷಿಸಲಾಗಿದೆ. ರಾಂಚಿಯ ಡೊರಾಂಡಾ ಖಜಾನೆಯಿಂದ 139.35 ಕೋಟಿ ರೂ. ಅವ್ಯವಹಾರ ಪ್ರಕಣರಣದ ವಿಚಾರಣೆ ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಇದೆ.

1992–93ರಲ್ಲಿ ಚಾಯಿಬಾಸಾ ಖಜಾನೆಯಿಂದ 33.67 ಕೋಟಿ ರೂ ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಅಧ್ಯಕ್ಷ ಲಾಲು ಸೇರಿದಂತೆ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆ ಅವಧಿಯಲ್ಲಿ ಲಾಲು ಅವರೇ ಬಿಹಾರದ ಮುಖ್ಯಮುಂತ್ರಿ  ಆಗಿದ್ದರು. ಆನಾರೋಗ್ಯದ ಕಾರಣದಿಂದಾಗಿ 72 ವರ್ಷ ವಯಸ್ಸಿನ ಲಾಲು ಅವರು ರಾಂಚಿಯಲ್ಲಿರುವ ರಾಜೇಂದ್ರ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ (ರಿಮ್ಸ್‌) ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.


ಇದನ್ನೂ ಓದಿ: ಟಿಆರ್‌ಪಿ ಹಗರಣ: ಗೋಸ್ವಾಮಿಗೆ ಒಂದೆಡೆ ಪೊಲೀಸ್‌, ಮೊತ್ತೊಂದೆಡೆ ಇಂಡಿಯಾ ಟುಡೆ ಚಾರ್ಜ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights