ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಂಧ್ರ-ತೆಲಂಗಾಣದಲ್ಲಿ ಭಾರಿ ಮಳೆಗೆ 2 ಸಾವು!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಇಬ್ಬರು ಸಾಮವನ್ನಪ್ಪಿದ್ದಾರೆ.

ಆಂಧ್ರ ಮತ್ತು ತೆಲಂಗಾಣದ  ವಿಜಯನಗರಂ, ನೆಲ್ಲೂರು, ಚಿತ್ತೂರು, ಅನಂತಪುರಂ, ಗುಂಟೂರು, ವಿಶಾಖಪಟ್ಟಣಂ ಸೇರಿ ಹಲವೆಡೆ ಭಾರಿ ಮಳೆಯಾಗುತ್ತಿದೆ. ವಿಶಾಖಪಟ್ಟಣಂನ ನರ್ಶಿಪಟ್ನಂ-ತೂನಿ ಹೆದ್ದಾರಿಯಲ್ಲಿ ಮಹಿಳೆಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದು, ಮೃತ ಮಹಿಳೆಯನ್ನು ಜಿ ದೇವಿ ಎಂದು ಗುರ್ತಿಸಲಾಗಿದೆ.

ಇನ್ನು ವಿಜಯವಾಡದ ಇಂದ್ರಕೀಳಾದ್ರಿ ಬೆಟ್ಟದಲ್ಲಿ ಭೂಕುಸಿತ ಉಂಟಾಗಿದ್ದು, ಈ ವೇಳೆ ಬಂಡೆಯೊಂದು ಉರುಳಿ ಬಂದು ಮನೆಗೆ ನುಗ್ಗಿದೆ. ಪರಿಣಾಮ ಮನೆಯಲ್ಲಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕಾಕಿನಾಡ ಕರಾವಳಿ ಪ್ರದೇಶದಲ್ಲಿ 17 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿಶಾಖಪಟ್ಟಣಂ, ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ, ಕೃಷ್ಣ ಮತ್ತು ಗುಂಟೂರು ಜಿಲ್ಲೆಗಳಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

ಇದನ್ನೂ ಓದಿ: ಯುಪಿ : 17 ವರ್ಷದ ಬಾಲಕಿ ಮೇಲೆ ಕ್ಯಾಂಪಸ್ ನಲ್ಲೇ ಅತ್ಯಾಚಾರ – ಆರೋಪಿಗಳ ಬಂಧನ!

ಕಾಕಿನಾಡ ಬಳಿಯ ಯಾನಂನಲ್ಲಿ 25 ಸೆಂ.ಮೀ ಮಳೆಯಾಗಿದ್ದು, ಪೂರ್ವ ಗೋದಾವರಿ ಜಿಲ್ಲೆಯ ಅಮಲಪುರಂನಲ್ಲಿ 19 ಸೆಂ.ಮೀ, ಪಶ್ಚಿಮ ಗೋದಾವರಿಯ ತನುಕುನಲ್ಲಿ 18 ಸೆಂ.ಮೀ, ವಿಶಾಖಪಟ್ಟಣದ ಭೀಮುನಿಪಟ್ನಂ, ಕೈಕಲೂರು, ಕೃಷ್ಣ ಜಿಲ್ಲೆಯ ತಿರುವೂರು, ಪಲಾಸ ಮತ್ತು ಇಚಾಪುರಂ ಶ್ರೀಕಾಕುಲಂ ಜಿಲ್ಲೆಯಲ್ಲಿ 15 ಸೆಂ.ಮೀ ಮಳೆಯಾಗಿದೆ.

ಶ್ರೀಕಕುಳಂ, ವಿಶಾಖಪಟ್ಟಣಂ, ವಿಜಯನಗರಂ, ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ ಕೃಷ್ಣ ಜಿಲ್ಲೆ, ಮತ್ತು ಕೃಷ್ಣ ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದರೆ,  ಕರ್ನೂಲ್, ಚಿತ್ತೂರು, ಅನಂತಪುರ, ಮತ್ತು ಕಡಪಾ ಜಿಲ್ಲೆಗಳಲ್ಲಿ ಮಧ್ಯಮ ಪ್ರಮಾಣದ ಮಳೆಯಾಗಿದೆ.

ಶ್ರೀಕಾಕುಳಂ ಜಿಲ್ಲೆಯಲ್ಲಿ ರಾತ್ರಿಯಿಂದ ಸುರಿದ ಮಳೆಗೆ ಜನ ಜೀವನ ತತ್ತರಿಸಿದೆ. ಭಾರಿ ಅನಾಹುತಗಳು ಸಂಭವಿಸಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಅನೇಕ ಮನೆಗಳು,ಜಲಾವೃತಗೊಂಡಿವೆ. ಇನ್ನು 4 ಗಂಟೆಗಳ ಕಾಲ ಇದೇ ಸ್ಥಿತಿ ಮುಂದುವರೆಯುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಹಾಗೂ ಜಾಗೃತರಾಗಿರಲು ಅಧಿಕಾರಿಗಳಿಗೆ ಎಚ್ಚರಿಸಲಾಗಿದೆ.


ಇದನ್ನೂ ಓದಿ: ಮಾಧ್ಯಮಗಳ ವಿರುದ್ಧ ಸಿಡಿದ ಬಾಲಿವುಡ್‌: ಸುದ್ದಿ ಚಾನೆಲ್‌ಗಳ ಮೇಲೆ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights