ಮಧ್ಯಪ್ರದೇಶ: ನೀತಿಸಂಹಿತೆ ಉಲ್ಲಂಘನೆ ಆರೋಪ, ಬಿಜೆಪಿಯ 14 ಸಚಿವರನ್ನು ವಜಾಗೊಳಿಸಲು ಕಾಂಗ್ರೆಸ್ ಆಗ್ರಹ!
ಮಧ್ಯಪ್ರದೇಶದಲ್ಲಿ ನವೆಂಬರ್ 3ರಂದು ಉಪಚುನಾವಣೆ ನಡೆಯಲಿದೆ. ಚುನಾವಣೆಗೆ ಮಧ್ಯಪ್ರದೇಶದಲ್ಲಿರುವ ಎಲ್ಲಾ ಪಕ್ಷಗಳು ಸಿದ್ದತೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ 14 ಸಚಿವರು ತಮ್ಮ ಸಚಿವ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅಲ್ಲದೆ, ಬಿಜೆಪಿಯ 14 ಸಚಿವರನ್ನು ವಜಾಗೊಳಿಸಬೇಕು ಮಧ್ಯಪ್ರದೇಶ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಕಾಂಗ್ರೆಸ್ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಆಡಳಿತಾರೂಢ ಬಿಜೆಪಿ, ತನ್ನ ಯಾವುದೇ ಅಭ್ಯರ್ಥಿಗಳು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿಲ್ಲ ಅಥವಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂದು ಹೇಳಿದೆ.
ಮಧ್ಯಪ್ರದೇಶದ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ 14 ಸಚಿವರು ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಮಧ್ಯಪ್ರದೇಶ ಕಾಂಗ್ರೆಸ್ ಘಟಕ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದೆ.
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ‘ಹಿಂದುತ್ವ’ ಕುರಿತು ರಾಜಕೀಯ : ಸಿಎಂ ಠಾಕ್ರೆ ರಾಜ್ಯಪಾಲ ಕೊಶ್ಯರಿಗೆ ಪತ್ರ!