RR ನಗರ: ಮೂರೂ ಪಕ್ಷಗಳ ಅಭ್ಯರ್ಥಿ ಘೋಷಣೆ; ಚುನಾವಣೆಗೆ ಭಾರಿ ವರ್ಕ್‌ಔಟ್‌!

ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಗೆ ನವೆಂಬರ್ 3 ರಂದು ನಡೆಯಲಿದೆ. ಚುನಾವಣೆಗೆ ಇನ್ನು 20 ದಿನಗಳಷ್ಟೇ ಬಾಕಿ ಇದ್ದು, ಮೂರೂ ಪಕ್ಷಗಳು ಚುನಾವಣೆಯಲ್ಲಿ ಗೆಲ್ಲಲು ಕಸರತ್ತು ನಡೆಸುತ್ತಿವೆ. ಕಾಂಗ್ರೆಸ್‌ ಈ ಮೊದಲೇ ತನ್ನ ಅಭ್ಯರ್ಥಿಯಾಗಿ ಮಾಜಿ ಐಎಎಸ್‌ ಅಧಿಕಾರಿ ಡಿಕೆ ರವಿ ಅವರ ಪತ್ನಿ ಕುಸುಮಾ ಅವರನ್ನು ಆಯ್ಕೆ ಮಾಡಿದ್ದು, ಪ್ರಚಾರ ಶುರುಮಾಡಿಕೊಂಡಿದೆ.

ಈ ಬೆನ್ನಲ್ಲೇ, ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ಇಂದು(ಮಂಗಳವಾರ) ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಿವೆ.  ಜೆಡಿಎಸ್ ಅಭ್ಯರ್ಥಿಯಾಗಿ ಜೆಡಿಎಸ್ ಜ್ಞಾನಭಾರತಿ ಘಟಕದ ಮುಖ್ಯಸ್ಥ ಕೃಷ್ಣಮೂರ್ತಿ ಹೆಸರನ್ನು ಘೋಷಿಸಲಾಗಿದೆ. ಕೃಷ್ಣಮೂರ್ತಿ ತಂದೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದವರು. ಈಗ ಅವರ ಮಗನಿಗೆ ಟಿಕೆಟ್ ಕೊಟ್ಟಿದ್ದೇವೆ. ಕೃಷ್ಣಮೂರ್ತಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮೈತ್ರಿ ಸರ್ಕಾರವನ್ನು ಪತನಗೊಳಿಸಿ, ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟನೆಗೊಂಡು ಬಿಜೆಪಿ ಸೇರಿರುವ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

ಸುಪ್ರೀಂ ಕೋರ್ಟ್ ನಲ್ಲಿ ಮುನಿರತ್ನ ವಿರುದ್ಧದ ಚುನಾವಣೆಯಲ್ಲಿ ಅಕ್ರಮವೆಸಗಿ ಗೆಲುವು ಸಾಧಿಸಿದ್ದರು ಎಂದು ಬಿಜೆಪಿ ಮುಖಂಡ ತುಳಸಿ ಮುನಿರಾಜುಗೌಡ ಸಲ್ಲಿಸಿದ ಅರ್ಜಿ ವಜಾಗೊಂಡ ಬೆನ್ನಲ್ಲೆ ಮುನಿರತ್ನಗೆ ಬಿಜೆಪಿ ಹೈಕಮಾಂಡ್ ಟಿಕೆಟ್‌ ಘೋಷಣೆ ಮಾಡಿದೆ.

ಆರ್‌ಆರ್‌ನಗರ ಕ್ಷೇತ್ರಕ್ಕೆ ಮೂರು ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಚುನಾವಣಾ ಕಣ ರಂಗೇರಿದೆ.

ನಮಗೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು ಸಮಾನ ವಿರೋಧಿಗಳು. ಎರಡೂ ಪಕ್ಷಗಳ ವಿರುದ್ಧ ನಮ್ಮ ಹೋರಾಟ ಇರುತ್ತದೆ. ಕಳೆದ ಎರಡು ಚುನಾವಣೆಗಳು ಬೇರೆ ಬೇರೆ ರೀತಿ ಆಗಿದೆ. ಈ ಬಾರಿ ಬೇರೆ ರೀತಿ ಚುನಾವಣೆ ಆಗುತ್ತೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ನೀತಿಸಂಹಿತೆ ಉಲ್ಲಂಘನೆ ಆರೋಪ, ಬಿಜೆಪಿಯ 14 ಸಚಿವರನ್ನು ವಜಾಗೊಳಿಸಲು ಕಾಂಗ್ರೆಸ್‌ ಆಗ್ರಹ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights