ಬೆಳಗಾವಿ ಲೋಕಸಭಾ ಉಪಚುನಾವಣೆ: ಮಾಜಿ ಸಚಿವ ಸುರೇಶ್‌ ಅಂಗಡಿ ಕುಟುಂಬಕ್ಕೆ ಬಿಜೆಪಿ ಟಿಕೆಟ್‌ಗಾಗಿ ಲಾಬಿ!

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಇನ್ನೂ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಇನ್ನೂ ದಿನಾಂಕ ನಿಗಧಿಯಾಗಿಲ್ಲ. ಆದರೆ, ಈಗಾಗಲೇ ಕೆಲವು ಬಿಜೆಪಿ ನಾಯಕರು ಟಿಕೆಟ್‌ಗಾಘಿ ಲಾಬಿ ನಡೆಸಲು ಮುಂದಾಗಿದ್ದಾರೆ.

ಹಾಗಾಗಿ ಬಿಜೆಪಿಯಲ್ಲಿ ಯಾರಿಗೆ ಟಿಕೆಟ್‌ ನೀಡುವುದು ಎಂದು ಗೊಂದಲ ಶುರುವಾಗಿದ್ದು, ಜಗದೀಶ್ ಶೆಟ್ಟರ್, ರಮೇಶ್ ಜಾರಕಿಹೊಳಿ ಮೊದಲಾದವರು ಸುರೇಶ್ ಅಂಗಡಿಯವರ ಪತ್ನಿ ಅಥವಾ ಮಗಳು ಶ್ರದ್ಧಾಗೆ ಟಿಕೆಟ್ ನೀಡಬೇಕೆಂದು ಅಭಿಪ್ರಾಯ ವ್ಯಕ್ತಡಿಸಿದ್ದಾರೆ.

ಜಗದೀಶ್ ಶೆಟ್ಟರ್ ಅವರು ತಮ್ಮ ಸೊಸೆ ಶ್ರದ್ಧಾಗೆ ಟಿಕೆಟ್ ಸಿಗಬೇಕೆಂದು ಬಯಸಿದ್ದಾರೆ. ಕಲವರು ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅವರಿಗೆ ನೀಡಬೇಕೆಂದು ಕೇಳುತ್ತಿದ್ದಾರೆ.

ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದ್ದು, ರಮೇಶ್ ಜಾರಕಿಹೊಳಿಯವರ ಪುತ್ರ ಅಮರನಾಥ ಅವರಿಗೆ ಸಹ ಹಲವರಿಂದ ಬೆಂಬಲ ಸಿಗುತ್ತಿದೆ. ಆದರೆ ತಮ್ಮ ಪುತ್ರ ಟಿಕೆಟ್ ಆಕಾಂಕ್ಷಿಯಲ್ಲ. ನನ್ನ ಸೋದರಿ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅವರಿಗೆ ಸಿಗಬೇಕೆಂದು ನನ್ನ ಬಯಕೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸುರೇಶ್ ಅಂಗಡಿಯವರ ಸಂಬಂಧಿಕರು, ಬೆಂಬಲಿಗರು ಮತ್ತು ಸ್ನೇಹಿತರು ಅಂಗಡಿಯವರ ಪತ್ನಿ ಮಂಗಳಾಗೆ ಟಿಕೆಟ್ ಸಿಗಬೇಕೆಂದು ಬಯಸುತ್ತಿದ್ದಾರೆ. ಅಂಗಡಿಯವರ ಹತ್ತಿರದ ಬಂಧು ಲಿಂಗರಾಜ್ ಪಾಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಅವರ ಕುಟುಂಬದವರಿಗೇ ನೀಡಬೇಕೆಂದು ಕೇಳುತ್ತಿದ್ದಾರೆ.

ಸುರೇಶ್ ಅಂಗಡಿಯವರ ಕುಟುಂಬಸ್ಥರು ರಾಜಕೀಯದಲ್ಲಿ ಯಾರೂ ಸಕ್ರಿಯವಾಗಿಲ್ಲ. ಹೀಗಿರುವಾಗ ಬಿಜೆಪಿ ಉನ್ನತ ಮಟ್ಟದ ನಾಯಕರು ಅದಕ್ಕೆ ಮಣೆ ಹಾಕುತ್ತಾರಾ ಎಂಬುದು ರಾಜ್ಯ ಬಿಜೆಪಿಯಲ್ಲಿ ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ.


ಇದನ್ನೂ ಓದಿ: ಮಾಧ್ಯಮಗಳಿಗೆ ಇಳಿಯದ ಡ್ರಗ್ಸ್‌ ನೆಶೆ: ಸುವರ್ಣ ನ್ಯೂಸ್‌ಗೆ ಎಲ್ಲೆಲ್ಲೂ ಸಂಜನಾದ್ದೇ ಜಪ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights