ಬಿಹಾರ ಚುನಾವಣೆ: ಎಲ್‌ಜೆಡಿ ಮುಖ್ಯಸ್ಥ ಶರದ್ ಯಾದವ್ ಪುತ್ರಿ ಕಾಂಗ್ರೆಸ್‌ಗೆ‌ ಸೇರ್ಪಡೆ!

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ, ಲೋಕತಾಂತ್ರಿಕ್‌ ಜನತಾದಳ (ಎಲ್‌ಜೆಡಿ) ಮುಖ್ಯಸ್ಥ ಶರದ್ ಯಾದವ್ ಅವರ ಪುತ್ರಿ ಸುಭಾಶಿನಿ ರಾಜ್ ರಾವ್ ಅವರು ಇಂದು(ಬುಧವಾರ) ಕಾಂಗ್ರೆಸ್ ಸೇರಲಿದ್ದಾರೆ.

ಮುಂಬರುವ ಬಿಹಾರ ಚುನಾವಣೆಯಲ್ಲಿಯೂ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್, ಸಿಪಿಐ, ಸಿಪಿಎಂ ಪಕ್ಷಗಳು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನೇತೃತ್ವದಲ್ಲಿ “ಮಹಾಗತ್ಬಂಧನ್” (ಮಹಾ ಮೈತ್ರಿ) ಯ ಭಾಗವಾಗಿವೆ.

ಉಪೇಂದ್ರ ಕುಶ್ವಾಹ ಅವರ ಆರ್‌ಎಲ್‌ಎಸ್‌ಪಿ ಪಕ್ಷವು ಮಹಾಗಟ್‌‌ಬಂಧನ್ ತೊರೆದು ಬಿಎಸ್‌ಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಹಿಂದೂಸ್ತಾನ್ ಅವಮ್ ಮೋರ್ಚಾ (ಎಚ್‌ಎಎಂ) ಮುಖ್ಯಸ್ಥ ಜಿತಾನ್ ರಾಮ್ ಮಾಂಜಿ ಎನ್‌ಡಿಎಗೆ ಸೇರ್ಪಡೆಗೊಂಡಿದ್ದಾರೆ. ಮಹಾಗಟ್‌ಬಂಧನ್‌ನಿಂದ ದೂರ ಉಳಿಯುವುದಾಗಿ ವಿಕಶೀಲ್ ಇನ್ಸಾನ್ ಪಾರ್ಟಿ (ವಿಐಪಿ)ಯ ಮುಖೇಶ್ ಸಾಹ್ನಿ ಘೋಷಿಸಿದ್ದಾರೆ.

ಇದನ್ನೂ ಓದಿ: ಬಿಹಾರ, ಉತ್ತರ ಪ್ರದೇಶದಂತೆ ಪ.ಬಂಗಾಳವೂ ಮಾಫಿಯಾ ರಾಜ್‌ ಆಗುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ

ಜೆಡಿಯು ಮತ್ತು ಎಲ್‌ಜೆಪಿ ಎರಡೂ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿಯಲ್ಲಿವೆ. ಹಾಗಾಗಿ, ಎನ್‌ಡಿಎ ಮೈತ್ರಿಕೂಟದಲ್ಲಿ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ)ವು ಬಿಜೆಪಿ ಸ್ಪರ್ಧಿಸಲಿರುವ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಿಲ್ಲ. ಆದರೆ, ಜನತಾದಳ (ಯುನೈಟೆಡ್) ವಿರುದ್ಧ ಕಣಕ್ಕಿಳಿಯಲಿದೆ.

243 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಬಿಹಾರದಲ್ಲಿ ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7 ರಂದು  ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ.  ನವೆಂಬರ್ 10 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ : ಪಕ್ಷಗಳಿಗೆ ಬಿಗ್ ಶಾಕ್ ಕೊಟ್ಟ ಚುನಾವಣಾ ಆಯೋಗ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights