ನಾಗರಿಕ ಸೇವೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ: ಪಂಜಾಬ್ ಸರ್ಕಾರ ನಿರ್ಧಾರ!
ಮಹಿಳೆಯರಿಗೆ ನಾಗರಿಕ ಸೇವೆಗಳಲ್ಲಿ 33% ಮೀಸಲಾತಿ ನೀಡಲು ಪಂಜಾಬ್ ನ ಸಿಎಂ ಅಮರೀಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಅನುಮೋದನೆ ನೀಡಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, 2022ರ ಆರ್ಥಿಕ ವರ್ಷ ಆರಂಭವಾಗುವ ವೇಳೆಗೆ ಪಂಜಾಬ್ ರಾಜ್ಯದಲ್ಲಿ ಒಂದು ಲಕ್ಷ ಉದ್ಯೋಗ ಒದಗಿಸಲು ‘ರಾಜ್ಯ ಉದ್ಯೋಗ ಯೋಜನೆ 2020-22’ ಜಾರಿಗೆ ಒಪ್ಪಿಗೆ ನೀಡಲಾಗಿದೆ.
ಇದನ್ನೂ ಓದಿ: ಮರಾಠ ಸಮುದಾಯಕ್ಕೆ ಮೀಸಲಾತಿ; ವಿಸ್ತೃತ ಪೀಠಕ್ಕೆ ಪ್ರಕರಣ; ಸಧ್ಯಕ್ಕಿಲ್ಲ ಮರಾಠಿಗರಿಗೆ ಮೀಸಲಾತಿ!
ಯೋಜನೆಯನ್ನು ಜಾರಿಗೊಳಿಸುವ ಉದ್ದೇಶಕ್ಕಾಗಿ ಪಂಜಾಬ್ ನಾಗರಿಕ ಸೇವಾ ಕಾಯಿದೆಗೆ ತಿದ್ದುಪಡಿ ತರಲಾಗಿದೆ. ಇದರಿಂದ ಎ, ಬಿ, ಸಿ ಮತ್ತು ಡಿ ದರ್ಜೆಯ ಸರಕಾರಿ ನೌಕರರ ಹುದ್ದೆಗಳು, ನಿಗಮ ಮತ್ತು ಮಂಡಳಿಯ ಹುದ್ದೆಗಳಿಗೆ ಮಹಿಳೆಯರನ್ನು ನೇರವಾಗಿ ನೇಮಕ ಮಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ರಾಜ್ಯ ಸರಕಾರಿ ನೌಕರರ ಹುದ್ದೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡಲು ಪಂಜಾಬ್ ಸರ್ಕಾರ ನಿರ್ಧರಿಸಿದೆ. ಈ ಕಾರಣಕ್ಕೆ ‘ಪಂಜಾಬ್ ನಾಗರಿಕ ಸೇವಾ ಕಾಯಿದೆ- 2020’ಕ್ಕೆ ತಿದ್ದುಪಡಿ ತರಲು ಸಂಪುಟ ಒಪ್ಪಿಗೆ ನೀಡಿದೆ.
ಇದನ್ನೂ ಓದಿ: NLSIUನಲ್ಲಿ ಸ್ಥಳೀಯರಿಗೆ 25% ಮೀಸಲಾತಿ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿದ ಹೈಕೋರ್ಟ್!
‘ರಾಜ್ಯ ಉದ್ಯೋಗ ಯೋಜನೆ 2020-22’ ಅಡಿಯಲ್ಲಿ 2021ರಲ್ಲಿ 50,000 ಹುದ್ದೆಗಳಿಗೆ ನೇಮಕ ಮಾಡಲಾಗುವುದು. ಉಳಿದ 50,000 ಹುದ್ದೆಗಳನ್ನು 2022ರಲ್ಲಿ ಭರ್ತಿ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.
‘ಸಾರ್ವಜನಿಕ ಸೇವೆಯಲ್ಲಿ ಹೆಚ್ಚು ಪಾರದರ್ಶಕತೆ ಮತ್ತು ಭ್ರಷ್ಟಾಚಾರವನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಬಹು ಸದಸ್ಯರ ಆಯೋಗವನ್ನು ಸ್ಥಾಪಿಸಲು ಕಳೆದ ತಿಂಗಳು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿಗೊಳಿಸಿದೆ.
ಇದನ್ನೂ ಓದಿ: ಕಾಂಗ್ರೆಸ್ಗೆ ಕೈಕೊಟ್ಟು ಬಿಜೆಪಿ ಸೇರಿರುವ RRನಗರ ಅಭ್ಯರ್ಥಿ ಮುನಿರತ್ನ ಆಸ್ತಿ ಎಷ್ಟಿದೆ ಗೊತ್ತಾ?

