ಜಮ್ಮುಕಾಶ್ಮೀರ: ವಿಶೇಷ ಸ್ಥಾನಮಾನವನ್ನು ಮರಳಿ ತರಲು ಪ್ರಾದೇಶಿಕ ಪಕ್ಷಗಳ ಮೈತ್ರಿ!

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಒಂದು ವರ್ಷ ಕಳೆದಿದೆ. ಆ ಸಂದರ್ಭದಲ್ಲಿ ಆರ್ಟಿಕರ್ 370 ರದ್ದತಿಗೆ ವಿರೋಧ ವ್ಯಕ್ತಪಡಿಸಿದ್ದ ಜಮ್ಮುಕಾಶ್ಮೀರದ ಹಲವು ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಅವರನ್ನು ಬಂಧನಮುಕ್ತ ಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಸಂವಿಧಾನದಲ್ಲಿ ಮರಳಿ ತರುವ ಉದ್ದೇಶಕ್ಕಾಗಿ  ಕಾಶ್ಮೀರದ ಪ್ರಾದೇಶಿಕ ಪಕ್ಷಗಳು ಮೈತ್ರಿ ರಚಿಸಿವೆ.

ಸಂವಿಧಾನದಲ್ಲಿ 370ನೇ ವಿಧಿಯನ್ನ ಪುನಃಸೇರಿಸಲು ಹೋರಾಟ ಮಾಡುವ ಉದ್ದೇಶದಿಂದ ಪೀಪಲ್ಸ್ ಅಲಾಯನ್ಸ್ ಫಾರ್ ಗುಪ್ಕರ್ ಡಿಕ್ಲರೇಶನ್ ಎಂಬ ಹೆಸರಿನಲ್ಲಿ ಮೈತ್ರಿಕೂಟ ರಚನೆ ಮಾಡಲಾಗಿದೆ. ಪ್ರದೇಶಿಕ ಪಕ್ಷಗಳಾದ ನ್ಯಾಷನಲ್ ಕಾನ್ಫೆರೆನ್ಸ್, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಹಾಗೂ ಇತರ ಪ್ರಾದೇಶಿಕ ಸಂಘಟನೆಗಳು ಈ ಮೈತ್ರಿಕೂಟದ ಜೊತೆಯಾಗಿವೆ.

ಸಾಜದ್ ಲೋನೆ ಕೂಡ ಇದಕ್ಕೆ ಕೈ ಜೋಡಿಸಿದ್ದಾರೆ. ನಮ್ಮದು ಸಂವಿಧಾನಿಕ ಹೋರಾಟ. 2019ರ ಆಗಸ್ಟ್ 5ಕ್ಕೆ ಮುಂಚೆ ಇದ್ದ ಕಾಶ್ಮೀರಿಗಳ ಹಕ್ಕನ್ನು ಮರಳಬೇಕೆಂಬುದು ನಮ್ಮ ಉದ್ದೇಶ” ಎಂದು ಫಾರೂಕ್ ಹೇಳಿರುವುದಾಗಿ ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ಧಾರ್ಮಿಕ ವಿಭಜನೆಯಿಂದ ಜಮ್ಮು ಕಾಶ್ಮೀರದಲ್ಲಿ ಹಿಂದೂ ಪ್ರಾಬಲ್ಯ ಹೆಚ್ಚಿಸಲು ಬಿಜೆಪಿ ಮುಂದಾಗಿದೆ: ಫಾರೂಕ್ ಅಬ್ದುಲ್ಲಾ

ಗುಪ್ಕರ್ ರಸ್ತೆಯಲ್ಲಿರುವ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ಕೇಂದ್ರ ಸರ್ಕಾರ 370ನೇ ವಿಧಿ ತೆಗೆದುಹಾಕುವ ಒಂದು ದಿನ ಮುನ್ನ (2019ರ ಆಗಸ್ಟ್ 4) ಎಲ್ಲಾ ಪ್ರಾದೇಶಿಕ ಪಕ್ಷಗಳ ಸಭೆ ನಡೆದಿತ್ತು. ಅದರಲ್ಲಿ ಜಮ್ಮು ಮತ್ತು ಕಾಶ್ಮೀರದ ಸ್ವಾಯತ್ತತೆ, ಅಸ್ಮಿತೆ, ವಿಶೇಷ ಸ್ಥಾನಮಾನವನ್ನು ಉಳಿಸಿಕೊಳ್ಳಲು ಎಲ್ಲಾ ಪಕ್ಷಗಳೂ ಒಗ್ಗೂಡಲು ನಿರ್ಧರಿಸಿದ್ದವು. ಅದಕ್ಕೆ ಗುಪ್ಕರ್ ಘೋಷಣೆ ಎಂದು ಹೆಸರಿಸಲಾಗಿತ್ತು. ಹಾಗಾಗಿ ಪೀಪಲ್ಸ್ ಅಲಾಯನ್ಸ್ ಫಾರ್ ಗುಪ್ಕರ್ ಡಿಕ್ಲರೇಶನ್ ಎಂದು ಮೈತ್ರಿಗೆ ಹೆಸರಿಸಲಾಗಿದೆ.

ಆಗಸ್ಟ್‌ 05 ರಂದು ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ, ಸಾಜದ್ ಲೋನೆ ಸೇರಿದಂತೆ ಕಣಿವೆ ರಾಜ್ಯದ ಬಹುತೇಕ ರಾಜಕೀಯ ಮುಖಂಡರು, ಹೋರಾ ಟಗಾರರೆಲ್ಲರನ್ನು ಬಂಧಿಸಲಾಗಿತ್ತು.

ಇತ್ತೀಚೆಗಷ್ಟೇ ಕೆಲವರನ್ನು ಬಿಡುಗಡೆಗೊಳಿಸಲಾಗಿದೆ. ಇದರ ಬೆನ್ನಲ್ಲೇ ವಿವಿಧ ರಾಜಕೀಯ ಮುಖಂಡರು ಮತ್ತೆ ಒಗ್ಗೂಡುತ್ತಿದ್ದಾರೆ. ನಿನ್ನೆ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಅವರು ಮೆಹಬೂಬ ಮುಫ್ತಿ ನಿವಾಸಕ್ಕೆ ತೆರಳಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅದರ ಬೆನ್ನಲ್ಲೇ ಗುಪ್ಕರ್ ಘೋಷಣೆಗೆ ಮೈತ್ರಿ ಪಕ್ಷಗಳು ಮುಂದಾಗಿವೆ.


ಇದನ್ನೂ ಓದಿ: ಕಾಶ್ಮೀರ ಆಡಳಿತದಲ್ಲಿ ಮುಸ್ಲಿಮರನ್ನು ತೆಗೆದು, ಹಿಂದೂಗಳನ್ನು ನೇಮಿಸಲಾಗಿದೆ: ಫಾರೂಕ್ ಅಬ್ದುಲ್ಲಾ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights