SSLC ಪೂರಕ ಪರೀಕ್ಷೆ ಫಲಿತಾಂಶ‌: ಶೇ.51 ರಷ್ಟು ವಿದ್ಯಾರ್ಥಿಗಳು ಪಾಸ್‌!

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷೆ ಬರೆದ 2,13,955 ವಿದ್ಯಾರ್ಥಿಗಳಲ್ಲಿ 1,09,719 ಉತ್ತೀರ್ಣರಾಗಿದ್ದಾರೆ. ಅಂದರೆ, ಶೇ. 51.28ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಪರೀಕ್ಷೆ ಬರೆದವರಲ್ಲಿ ಶೇ. 48.56 ರಷ್ಟು ಬಾಲಕರು ಹಾಗೂ  ಶೇ.55.96 ರಷ್ಟು ಬಾಲಕಿಯರು ಪಾಸಾಗಿದ್ದಾರೆ.  ನಗರ ಪ್ರದೇಶ- ಶೇ. 48.25, ಗ್ರಾಮೀಣ ಪ್ರದೇಶ- ಶೇ. 54.21 ರಷ್ಟು ಫಲಿತಾಂಶ ಬಂದಿದೆ.ಅನುದಾನಿತ ಶಾಲೆಗಳು ಶೇ. 53.13 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ. ಅನುದಾನರಹಿತ ಶಾಲೆಗಳು ಶೇ. 50.87 ಮತ್ತು ಸರ್ಕಾರಿ ಶಾಲೆಗಳು ಶೇ. 50.19 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಸೆಪ್ಟೆಂಬರ್ 21ರಿಂದ 29 ರವರೆಗೆ ರಾಜ್ಯದ 772 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿಗಾಗಿ ಅಕ್ಟೋಬರ್ 17 ರಿಂದ 21 ರ ವರೆಗೆ ಅರ್ಜಿ ಸಲ್ಲಿಸಬಹುದು.

ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 20 ರಿಂದ 28 ರವರೆಗೆ ಹಾಗೂ ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 20 ರಿಂದ 29ರವರೆಗೆ ದಿನಾಂಕ ನಿಗದಿಪಡಿಸಲಾಗಿದೆ.


ಇದನ್ನೂ ಓದಿ: ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ: ಶೇ.41 ವಿದ್ಯಾರ್ಥಿಗಳು ಪಾಸ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights