ಗುಂಡು ಹಾರಿಸಿ ಬಿಜೆಪಿ ಮಂಡಲ್‌ ಉಪಾಧ್ಯಕ್ಷನ ಹತ್ಯೆ!

ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಬಿಜೆಪಿಯ ಮಂಡಲ್‌ (ವಾರ್ಡ್‌) ಉಪಾಧ್ಯಕ್ಷ ಡಿ.ಕೆ.ಗುಪ್ತಾ ಹತ್ಯೆಯಾಗಿದ್ದಾರೆ.

ವರದಿಗಳ ಪ್ರಕಾರ, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಬಿಜೆಪಿ ಮುಖಂಡ ಡಿ.ಕೆ.ಗುಪ್ತಾ ಅವರ ಮೇಲೆ ಗುಂಡು ಹಾರಿಸಿದ್ದಾರೆ.

ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಗುಂಡಿನ ದಾಳಿ ನಡೆದ ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ತಮ್ಮ ದಿನಸಿ ಅಂಗಡಿಯಲ್ಲಿದ್ದ ಡಿಕೆ ಗುಪ್ತಾ ಅವರನ್ನು ಬೈಕ್‌ನಲ್ಲಿ ಬಂದು ಮೂವರು ದುಷ್ಕರ್ಮಿಗಳು ಗುಂಡು ಹಾಕಿಸಿ ಪರಾರಿಯಾಗಿದ್ದಾರೆ.

ಗಾಯಗೊಂಡ ಗುಪ್ತಾ ಅವರನ್ನು ಆಗ್ರಾದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ನವೆಂಬರ್ 3 ರಂದು ನಡೆಯಲಿರುವ ಉಪಚುನಾವಣೆಗಳಿಗಾಗಿ ಗುಪ್ತಾ ಬಿಜೆಪಿಯ ತುಂಡ್ಲಾ ಅಭ್ಯರ್ಥಿಯನ್ನು ಬೆಂಬಲಿಸಿ ಪ್ರಚಾರಕ್ಕೆ ಹೋಗಿದ್ದರು ಎನ್ನಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights