ಬಿಹಾರ ಚುನಾವಣೆ: ಸಿಎಂ ಅಭ್ಯರ್ಥಿಗಳ ಮುಖಾಮುಖಿ ಚರ್ಚೆಗೆ ತೇಜಸ್ವಿ ಯಾದವ್‌ ಸವಾಲು

ಬಿಹಾರ ವಿಧಾನಸಭಾ ಚುನಾವಣೆಗೆ ಇನ್ನು 08 ದಿನಗಳಷ್ಟೇ ಬಾಕಿ ಇವೆ. ಆಡಳಿತಾರೂಢ ಪಕ್ಷಗಳು ಮತ್ತು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರನ್ನು ಮುಖಾಮುಖಿ ಚರ್ಚೆಗೆ ವಿಧಾನಸಭಾ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್‌ ಆಹ್ವಾನಿಸಿ ಸವಾಲು ಹಾಕಿದ್ದಾರೆ.

ಸರ್ಕಾರದ ಮುಖ್ಯಸ್ಥರಾಗಿ ಕಳೆದ 15 ವರ್ಷಗಳಲ್ಲಿ ಅವರು ಮಾಡಿದ ಸಾಧನೆಗಳ ಬಗ್ಗೆ ಚರ್ಚಿಸಲು ಅಭಿವೃದ್ಧಿಯ ವಿಷಯದಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲು ಯಾವುದೇ ಸಮಯ ಮತ್ತು ಸ್ಥಳವನ್ನು ಆಯ್ಕೆ ಮಾಡಬಹುದು ಎಂದು ತೇಜಸ್ವಿ ಯಾದವ್ ನಿತೀಶ್ ಕುಮಾರ್ ಅವರಿಗೆ ಸವಾಲು ಹಾಕಿದರು.

“ಕಳೆದ 15 ವರ್ಷಗಳಲ್ಲಿ ನಿತೀಶ್ ಕುಮಾರ್ ಅವರು ತಮ್ಮ ಸಾಧನೆಗಳ ಬಗ್ಗೆ ನನ್ನೊಂದಿಗೆ ಚರ್ಚಿಸಲಿ ಎಂದು ನಾನು ಒತ್ತಾಯಿಸುತ್ತೇನೆ. ಬಿಹಾರದ ವೈಶಾಲಿಯಲ್ಲಿ ಮೊದಲ ಬಾರಿಗೆ ಪ್ರಜಾಪ್ರಭುತ್ವ ಸ್ಥಾಪನೆಯಾದ ಕಾರಣ, ಇಲ್ಲಿ ನಾವು ಮುಖ್ಯಮಂತ್ರಿ ಅಭ್ಯರ್ಥಿಗಳ ನಡುವೆ ನೇರ ಚರ್ಚೆ ನಡೆಯಬೇಕು ಎನ್ನುವ ಈ ಸಂಪ್ರದಾಯವನ್ನು ಪ್ರಾರಂಭಿಸೋಣ” ಎಂದಿದ್ದಾರೆ.

“ಜನರು ರಾಜ್ಯ ಸರ್ಕಾರದ ಮೇಲೆ ತೀವ್ರ ಕೋಪಗೊಂಡಿದ್ದು, ಮಹಾ ಘಟಬಂಧನ್ ಸ್ಪಷ್ಟ ಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತದೆ ಎಂದು ತೇಜಸ್ವಿ ಯಾದವ್ ಹೇಳಿದರು.

ಪ್ರತಿ ಚುನಾವಣಾ ಸಭೆಯಲ್ಲೂ ನಿರುದ್ಯೋಗ ಮತ್ತು ವಲಸೆಯ ವಿಷಯಗಳ ಬಗ್ಗೆ ತೇಜಸ್ವಿ ಯಾದವ್ ನಿರಂತರವಾಗಿ ಆಡಳಿತ ಪಕ್ಷವನ್ನು ಗುರಿಯಾಗಿಸಿಕೊಂಡಿದ್ದಾರೆ.

ಇದರ ನಡುವೆ, ಸವಾಲಿಗೆ ಪ್ರತಿಕ್ರಿಯಿಸಿದ ಬಿಹಾರದ ಮಾಜಿ ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ನಿತ್ಯಾನಂದ್ ರೈ, “ಅಭಿವೃದ್ಧಿಯ ವಿಷಯದಲ್ಲಿ ಎಲ್ಲಿಯಾದರೂ ಚರ್ಚಿಸಲು ಅವರು ಸಿದ್ಧರಾಗಿದ್ದಾರೆ. ಆದರೆ ಈಗ ನಿತೀಶ್ ಕುಮಾರ್ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ” ಎಂದರು.

ಬಿಹಾರದಲ್ಲಿ, 243 ಸದಸ್ಯರ ವಿಧಾನಸಭಾ ಚುನಾವಣೆಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7 ರಂದು ಮತದಾನ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಉಪಚುನಾವಣೆ: ಕೈ-ತೆನೆ ಪಕ್ಷಗಳಿಗೆ ಶಾಕ್‌; ಕಾಂಗ್ರೆಸ್‌, JDS ಮುಖಂಡರು BJPಗೆ ಪಕ್ಷಾಂತರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights