ಕೇಂದ್ರದ ಕೃಷಿ ಮಸೂದೆಗೆ ವಿರೋಧ: 3 ಪರ್ಯಾಯ ಮಸೂದೆಗಳನ್ನು ಮಂಡಿಸಿದ ಪಂಜಾಬ್‌ ಸಿಎಂ!

ತೀವ್ರ ವಿವಾದ ಮತ್ತು ಪ್ರತಿಭಟನೆಗೆ ಕಾರಣವಾಗಿರುವ ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರುದ್ಧ ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ.

ನೂತನ ಕೃಷಿ ಮಸೂದೆಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್‌ ಅವರು ಕೃಷಿ ಮಸೂದೆಗಳ ವಿರುದ್ಧ ನಿರ್ಣಯ ಮಂಡನೆ ಮಂಡಿಸಿದ್ದಾರೆ.

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮೂರು ಮಸೂದೆಗಳನ್ನು ಮಂಡಿಸಿದ್ದಾರೆ. ಅವುಗಳೆಂದರೆ, ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020, ಅಗತ್ಯ ಸರಕುಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020, ಮತ್ತು ಬೆಲೆ ಭರವಸೆ ಕುರಿತು ರೈತರ ಒಪ್ಪಂದ ಮತ್ತು ಕೃಷಿ ಸೇವೆಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020.

ಸದನವನ್ನುದ್ದೇಶಿಸಿ ಮಾತನಾಡಿರುವ ಸಿಂಗ್ ಅವರು, ಕೃಷಿ ರಾಜ್ಯದ ವಿಚಾರವಾಗಿದ್ದು, ಕೇಂದ್ರ ಸರಕಾರ ಇದನ್ನು ನಿರ್ಲಕ್ಷಿಸುತ್ತಿದೆ. ಭಾರತ ಸರಕಾರ ಮಾಡಲು ಹೊರಟಿರುವ ಕೆಲಸವು ನನಗೆ ವಿಚಿತ್ರವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸಿ ಪಂಜಾಬ್‌ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights