‘ಐಟಂ’‌ ಹೇಳಿಕೆ ದುರದೃಷ್ಟಕರ ಎಂದ ರಾಹುಲ್‌ಗಾಂಧಿ‌; ಕ್ಷಮೆ ಕೇಳಲ್ಲ ಎಂದ ಕಮಲ್‌ನಾಥ್‌

ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ಸಚಿವೆ ಇಮಾರ್ತಿ ದೇವಿ ಅವರನ್ನು ಐಟಂ ಎಂದು ಕರೆದು ವಿವಾದ ಸೃಷ್ಟಿಸಿರುವ ಮಾಜಿ ಸಿಎಂ ಕಮಲ್‌ನಾಥ್‌ ಅವರ ಹೇಳಿಕೆಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಯನಾಡಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಮಲ್‌ನಾಥ್ ನನ್ನ ಪಕ್ಷದವರಾಗಿದ್ದರೂ, ಅವರು ಒರ್ವ ಮಹಿಳೆಗೆ ಬಳಸಿದ ಭಾಷೆ ನನಗೆ ಇಷ್ಟವಾಗಿಲ್ಲ. ಅವರು ಯಾರೇ ಆಗಿದ್ದರೂ ಅಂತಹ ಹೇಳಿಕೆಯನ್ನು ಪ್ರಶಂಸಿಸುವುದಿಲ್. ಕಮಲ್‌ನಾಥ್‌ ಅವರ ಹೇಳಿಕೆ ದುರದೃಷ್ಟಕರ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಭಾನುವಾರ ಗ್ವಾಲಿಯರ್‌ನ ದಬ್ರಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸುರೇಶ್ ರಾಜೆ ಅವರ ಪರ ಮತ ಯಾಚನೆ ಮಾಡುತ್ತಾ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕಮಲ್ ನಾಥ್, ನಮ್ಮ ಅಭ್ಯರ್ಥಿ ಸುರೇಶ್ ರಾಜೆ ಸರಳ ಮನುಷ್ಯ, ಆಕೆಯಂಥಲ್ಲ, ಆಕೆಯ ಹೆಸರೇನು, ನಿಮಗೆಲ್ಲಾ ಆಕೆಯ ಬಗ್ಗೆ ನನಗಿಂತ ಚೆನ್ನಾಗಿ ಗೊತ್ತಿದೆ. ನೀವೆಲ್ಲಾ ನನಗೆ ಮೊದಲೇ ಎಚ್ಚರಿಕೆ ನೀಡಬೇಕಾಗಿತ್ತು, ಆಕೆ ಎಂತಹ ಐಟಮ್ ಎಂದು ಕರೆದಿದ್ದು, ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆಯನ್ನು ರಾಹುಲ್‌ಗಾಂಧಿ ಟೀಕಿಸಿದ್ದಾರೆ.

ರಾಹುಲ್ ಅವರ ಖಂಡನೆ ಸಂಬಂಧ ಪ್ರತಿಕ್ರಯಿಸಿರುವ ಕಮಲ್ ನಾಥ್, “ಯಾರನ್ನೂ ಅವಮಾನಿಸುವ ಉದ್ದೇಶವಿಲ್ಲದಿದ್ದಾಗ ನಾನು ಯಾಕೆ ಕ್ಷಮೆಯಾಚಿಸಬೇಕು?ಈ ಹಿಂದೆಯೂ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ’ಐಟಂ’ ಎಂಬ ಪದ ಬಳಕೆ ಮಾಡಲಾಗಿದೆ. ನವೆಂಬರ್ 3 ರ ರಾಜ್ಯ ಉಪಚುನಾವಣೆಯಲ್ಲಿ ಸೋಲೊಪ್ಪಿಕೊಳ್ಳುವ ಭೀತಿಯಿಂದ ಬಿಜೆಪಿ ಜನರ ಗಮನ ಬೇರೆಡೆ ಸೆಳೆಯಲು ಈ ತಂತ್ರ ಹೂಡಿದೆ. ನನ್ನ ಹೇಳಿಕೆಯಿಂದ ಯಾರಾದರೂ ಅವಮಾನಕ್ಕೊಳಗಾಗಿದ್ದರೆ, ನಾನು ಈಗಾಗಲೇ ಅದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದೇನೆ”  ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಚಿವೆಯನ್ನು ಐಟಂ ಎಂದು ಕರೆದ ಮಾಜಿ ಸಿಎಂ: ಬಿಜೆಪಿಗರಿಂದ ತರಾಟೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights