ಶಿರಾದಲ್ಲಿ ದೇವೇಗೌಡ v/s ಸಿದ್ದರಾಮಯ್ಯ ಫೈಟ್ : ಚುನಾವಣೆ ಎದುರಿಸಲು ಸಿದ್ಧವಾಯ್ತ ಸಿದ್ದು ಸೂತ್ರ…!

ರಾಜ್ಯ ರಾಜಕೀಯದಲ್ಲಿ ಶಿರಾ ಹಾಗೂ ಆರ್ ಆರ್ ನಗರ ಉಪಚುನಾವಣೆ ಕಾವು ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್ ನಿಂದ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನಿಂದ ಹೆಚ್ ಡಿ ದೇವೇಗೌಡರು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಅಖಾಡಕ್ಕಿಳಿದು ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ಚುನಾವಣೆ ಎದುರಿಸಲು ಸಿದ್ಧವಾಗಿವೆ ಸಿದ್ದು ಸೂತ್ರಗಳು.

ಹೌದು… ರಾಜ್ಯದ ಬಿಜೆಪಿ ಸರ್ಕಾರ ಆಂತರಿಕ ಬಿಕ್ಕಟ್ಟಿನಿಂದ ಪತನಗೊಂಡರೆ ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಬಿಜೆಪಿಯಲ್ಲೇ ಯಡಿಯೂರಪ್ಪ ಹೆಚ್ಚು ದಿನ ಸಿಎಂ ಆಗಿ ಉಳಿಯುವುದಿಲ್ಲ ಎನ್ನುವ ಚರ್ಚೆ ಆಗುತ್ತಿವೆ. ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಡಿಸಿದ ಹೊಸ ಬಾಂಬ್ ಕೋಲಾಹಲ ಸೃಷ್ಟಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಾವಾಗಿ ಈ ಸರ್ಕಾರವನ್ನು ಉರುಳಿಸಲು ಹೋಗುವುದಿಲ್ಲ. ಅಡ್ಡ ಮಾರ್ಗದಿಂದ ಅಧಿಕಾರಕ್ಕೆ ಬಂದಿರುವ ಈ ಬಿಜೆಪಿ ಸರ್ಕಾರ ಬಹಳ ದಿನ ಉಳಿಯಲು ಸಾಧ್ಯವಿಲ್ಲ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಶಿರಾ ಉಪಚುನಾವಣಾ ಕಣದಲ್ಲಿ ಮದಗಜಗಳ ಮತಭೇಟೆ ಜೋರಾಗಿದೆ. ಜೆಡಿಎಸ್ ಅಭ್ಯರ್ಥಿ ಪರ ಖುದ್ದು ಹೆಚ್ ಡಿ ದೇವೇಗೌಡರೇ ಅಖಾಡಕ್ಕೆ ದುಮುಕಿದ್ದು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಅತ್ತ ದಳಪತಿಗಳು ಸಂಚರಿಸುತ್ತಿದ್ದರೆ ಇತ್ತ ಕಾಂಗ್ರೆಸ್ ಪರ ಮಾಜಿ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದಾರೆ. ಶಿರಾದಲ್ಲಿ ದೇವೇಗೌಡರು ಹಾಗೂ ಸಿದ್ಧರಾಮಯ್ಯ ರ್ಯಾಲಿ ಉಪಚುನಾವಣೆಯನ್ನು ಮತ್ತಷ್ಟು ಕಾವೇರುವಂತೆ ಮಾಡಿದೆ.

ಇನ್ನೂ ರಾಜರಾಜೇಶ್ವರಿ ನಗರ ಬೈ ಎಲೆಕ್ಷನ್ ಕೆಪಿಪಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪಾಲಿಗೆ ಮಾಡು ಇಲ್ಲವೇ ಮಡಿ ಸಮರವಾಗಿದೆ. ಸರಣಿ ಕಾರ್ಯಕರ್ತರ ಸಭೆ ನಡೆಸುತ್ತಿರುವ ಕನಕಪುರ ಬಂಡೆ ಕುಸುಮಾ ಗೆಲುವಿಗೆ ರಣತಂತ್ರ ಹೆಣದಿದ್ದಾರೆ. ಡಿಕೆ ಶಿವಕುಮಾರ್ ಅವರ ಸಹೋದರ ಸಂಸದ ಡಿಕೆ ಸುರೇಶ್ ಅಣ್ಣನಿಗೆ ಸಾತ್ ನೀಡಿದ್ದು ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ.

ಇನ್ನೂ ಉತ್ತರ ಕರ್ನಾಟಕದಲ್ಲಿ ಎದುರಾದ ಪ್ರವಾಹ ಸಂಕಷ್ಟಕ್ಕೆ ಸಿಲುಕಿದ ಜನರ ಪರಿಸ್ಥಿತಿಯನ್ನು ಅರಿತುಕೊಳ್ಳಲು ವಿಮಾನದಲ್ಲಿ ವೈಮಾನಿಕ ಸಮೀಕ್ಷೆ ಮಾಡಿದರೆ ಅರ್ಥವಾಗದು ಎಂದು ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ ಸಿದ್ಧರಾಮಯ್ಯ ತಾವು ಕಾರಿನಲ್ಲಿ ವೈಮಾನಿಕ ಸಮೀಕ್ಷ ಮಾಡಿ ಜನರಿಗೆ ಹತ್ತಿರವಾಗುವುದಾಗಿ ಹೇಳಿಕೊಂಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights