ನಳಿನ್‌ ಒಬ್ಬ ಪೋಕರಿ, ಯಾರದ್ದೋ ಸಂತೋಷಕ್ಕೆ BJP ಅಧ್ಯಕ್ಷನಾಗಿದ್ದಾರೆ: ಸಿದ್ದರಾಮಯ್ಯ

ಹುಲಿಯಾ ಕಾಡಿಗೆ ಹೋಗಬೇಕಾಗುತ್ತದೆ, ಬಂಡೆ ಛಿತ್ರವಾಗುತ್ತದೆ ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ ಕುಮಾರ್‌ ಕಠೀಲ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಕಠೀಲ್‌ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್. ಮಂಗಳೂರಿನ ಬೀದಿ ಅಲೆದಾಡುತ್ತಿದ್ದ ಪೋಕರಿ, ಯಾರದ್ದೋ ಸಂತೋಷಕ್ಕೆ ಬಿಜೆಪಿ ಅಧ್ಯಕ್ಷನನ್ನಾಗಿ ಮಾಡಿದ್ದಾರೆ.  ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ ಎಂದು ಕಿಡಿಕಾರಿದ್ದಾರೆ. 

ನಿನ್ನೆ (ಬುಧವಾರ) ರಾಜಾರೇಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿದ್ದ ನಳಿನ್‌ ಕುಮಾರ್ ಕಠೀಲ್‌, ಕಾಂಗ್ರೆಸ್‌ ವಿರುದ್ಧ ವಾಗ್ದಳಿ ನಡಿಸಿದ್ದರು. ನಳಿನ್‌ ಮಾತುಗಳಿಗೆ ತೀಕ್ಷ್ಣವಾಗಿ ಟ್ವಿಟರ್‌ನಲ್ಲಿ ಪ್ರತಿಕ್ರಿಸಿರುವ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕಠೀಲ್‌ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ಹೇಳಿದ್ದಾರೆ. 

ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ” ಎಂದಿದ್ದಾರೆ.

ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ಕಠೀಲ್‌ ಎಂ‌ಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದು ಹೇಳಿದ್ದಾರೆ. 

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್‌ ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ತಿಳಿಸಿದ್ದಾರೆ. 

ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್‌ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಹೇಳಿದ್ದಾರೆ. 


ಇದನ್ನೂ ಓದಿ: ಬಿಜೆಪಿ ಬೌದ್ದಿಕ ದಾರಿದ್ರ್ಯದಿಂದ ನಕಲಿ ಶ್ಯಾಮ ನಳಿನ್‌ಕುಮಾರ್‌’ರನ್ನು ಅಧ್ಯಕ್ಷರನ್ನಾಗಿಸಿದೆ: ಸಿದ್ದರಾಮಯ್ಯ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights