ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ಗೆ ಹೃದಯಾಘಾತ!
ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು ಇಲ್ಲಿನ ಖಾಸಗೀ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ. ಸದ್ಯ ಕಪಿಲ್ ದೇವ್ ಅವರಿಗೆ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತಿದ್ದು, ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.
ಕಪಿಲ್ ದೇವ್ ಅವರು 1978 ಅಕ್ಟೋಬರ್ 1 ರಂದು ಪಾಕಿಸ್ತಾನವ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆೆ ಕಾಲಿಟ್ಟರು. ಭಾರತದ ಪರ 131 ಟೆಸ್ಟ್ ಪಂದ್ಯಗಳಲ್ಲಿ 5,248 ರನ್ ಗಳು ಹಾಗೂ 434 ವಿಕೆಟ್ಗಳು, 225 ಏಕದಿನ ಪಂದ್ಯಗಳಿಂದ 3,783 ರನ್ ಮತ್ತು 253 ವಿಕೆಟ್ಗಳನ್ನು ಕಬಳಿಸಿದ್ದಾರೆ.
ಇದನ್ನೂ ಓದಿ: Cricket : world cup ಗೆದ್ದ ನಾಯಕನಿಗು Lock down effect, ಹೊಸ ಅವತಾರದಲ್ಲಿ ದೇವ್..