ಬಿಜೆಪಿ ಬಂಡಾಯ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಕಟೀಲ್…
ಬಂಡಾಯ ಬಿಜೆಪಿ ಅಭ್ಯರ್ಥಿ ಹಿರಿಯೂರು ಬಿಜೆಪಿ ಶಾಸಕಿ ಹಾಗೂ ಎ.ಕೃಷ್ಣಪ್ಪ ಪುತ್ರಿ ಪೂರ್ಣಿಮಾ ಶ್ರೀನಿವಾಸ್ ಪತಿ ಡಿ.ಟಿ.ಶ್ರೀನಿವಾಸ್ ಉಚ್ಚಾಟನೆ ಮಾಡಲಾಗಿದೆ.
ಆಗ್ನೇಯ ಪದವೀಧರರ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿರುವ ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ರಾಜ್ಯಧ್ಯಕ್ಷ ಕಟೀಲ್ ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಪತಿ ಡಿ.ಟಿ. ಶ್ರೀನಿವಾಸ್ ಅವರು ಬಿಜೆಪಿ ಹಿಂದುಳಿದ ಮೋರ್ಚಾ ಉಪಾದ್ಯಕ್ಷರಾಗಿದ್ದರು. ಎಂಎಲ್ ಸಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಶ್ರೀನಿವಾಸ್ ಕಣದಲ್ಲಿದ್ದರು.
ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ ಗೌಡ ಅವರ ವಿರುದ್ಧ ಸ್ಪರ್ಧಿಸಿರುವ ಡಿ.ಟಿ ಶ್ರೀನಿವಾಸ್, ಕಳೆದ ಒಂದೂವರೆ ದಶಕದಿಂದ ನಾನು ಮತದಾರರ ಸಂಪರ್ಕದಲ್ಲಿದ್ದೇನೆ, ಬಿಜೆಪಿ ಟೆಕೆಟ್ ನಾನು ಬಯಸಿದ್ದೆ, ಆದರೆ ಸಿಗಲಿಲ್ಲ, ಎಲ್ಲಾ ಅಹಿಂದಾ ಸುಮುದಾಯದ ಮತದಾರರು ನನ್ನ ಪರವಾಗಿದ್ದಾರೆ ಎಂದು ಶ್ರೀನಿವಾಸ್ ತಿಳಿಸಿದ್ದಾರೆ. ಅಹಿಂದ ಸಮುದಾಯದ ಮತಗಳು ಮತ್ತು ಹಲವು ಹಿಂದುಳಿದ ವರ್ಗಗಳ ಮುಖಂಡರು ಪಕ್ಷದ ನಿಯಮಗಳನ್ನು ಉಲ್ಲಂಘಿಸಿ ಶ್ರೀನಿವಾಸ್ ಅವರಿಗೆ ಬೆಂಬಲ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.