ಪ್ರವಾಹ ಪೀಡಿತರಿಗೆ 10,000 ಕೋಟಿ ರೂ ಪರಿಹಾರ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಹಾನಿ ಅನುಭವಿಸುತ್ತಿರುವ ಮಹಾರಾಷ್ಟ್ರದ ರೈತರು ಮತ್ತು ಪ್ರವಾಹ ಪೀಡಿತ ಜನರಿಗೆ 10,000 ಕೋಟಿ ರೂ. ನೆರವು ನೀಡುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘೋಷಿಸಿದ್ದಾರೆ.

ಪರಿಹಾರ ಕುರಿತು ಮಹಾ ವಿಕಾಸ್ ಅಘಾಡಿ(ಎಂವಿಎ)ಯ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಠಾಕ್ರೆ, ದೀಪಾವಳಿಯಿಂದ ಈ ನೆರವು ನೀಡಲಾಗುವುದು ಎಂದು ಹೇಳಿದರು.

ಮಹಾರಾಷ್ಟ್ರ ಸರ್ಕಾರವು ಇನ್ನೂ 38,000 ಕೋಟಿ ರೂಪಾಯಿಯನ್ನು ಕೇಂದ್ರದಿಂದ ಪಡೆಯಬೇಕಾಗಿದೆ ಎಂದು ಠಾಕ್ರೆ ಹೇಳಿದ್ದಾರೆ.

“ನಾನು ಈ ಹಣಕಾಸಿನ ನೆರವಿಗೆ ಪ್ಯಾಕೇಜ್ ಎಂಬ ಪದ ಬಳಸಲು ಇಷ್ಟಪಡುವುದಿಲ್ಲ, ಆದರೆ ನಾವು 10,000 ಕೋಟಿ ರೂಪಾಯಿಗಳ ಸಹಾಯವನ್ನು ನೀಡುತ್ತೇವೆ. ಇದನ್ನು ವಿವಿಧ ಉದ್ದೇಶಗಳಿಗಾಗಿ ಬಳಸಲಾಗುತ್ತದೆ” ಎಂದು ಮಹಾ ಸಿಎಂ ತಿಳಿಸಿದರು.

ಕಳೆದ ವಾರ ಭಾರಿ ಮಳೆ ಮತ್ತು ಪ್ರವಾಹ ಪುಣೆ, ಔರಂಗಾಬಾದ್ ಮತ್ತು ಕೊಂಕಣ ವಿಭಾಗಗಳಲ್ಲಿ ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡಿದ್ದು, ಇದರಿಂದಾಗಿ ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ.


ಇದನ್ನೂ ಓದಿ: ಬಿಜೆಪಿ ಬಂಡಾಯ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಕಟೀಲ್…

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights