ಚುನಾವಣಾ ಆಯೋಗ ಮೌನ; ನ್ಯಾಯಸಮ್ಮತ ಮತದಾನ ನಡೆಯುವುದು ಅನುಮಾನ: ದಿನೇಶ್‌ ಗುಂಡೂರಾವ್

ಶಿರಾ ಮತ್ತು RRನಗರ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ದುಗುಡ ವ್ಯಕ್ತಪಡಿಸಿದ್ದಾರೆ.

ಶಿರಾ ಮತ್ತು RRನಗರ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ. BJP ಈಗಾಗಲೇ ಆಡಳಿತ ಯಂತ್ರ ದುರುಪಯೋಗ ಪಡಿಸಿಕೊಂಡು ಜನರ ಮೇಲೆ ಪ್ರಭಾವ ಬೀರುತ್ತಿದೆ. RR ನಗರದಲ್ಲಿ ಹಣ ಮತ್ತು ಸೆಟ್‌ಟಾಪ್ ಬಾಕ್ಸ್ ವಿತರಣೆ ಮಾಡಿದ್ದರೂ ಚುನಾವಣಾ ಅಯೋಗ ಮೌನವಾಗಿದೆ. ಚುನಾವಣಾ ಆಯೋಗ ಕೇವಲ ಬೆದರು ಬೊಂಬೆಯೇ? ಎಂದು ಅವರತು ಟ್ವೀಟ್‌ ಮಾಡಿದ್ದಾರೆ.

ಚುನಾವಣಾ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಚುನಾವಣಾ ಆಯೋಗ ಕೇವಲ ಬೆದರು ಬೊಂಬೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಿರಾ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ? ವಿಡಿಯೋ ವೈರಲ್

ಈ ಎರಡೂ ಕ್ಷೇತ್ರದಲ್ಲಿ ಅಕ್ರಮಗಳು ನಡೆಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಶಿರಾದಲ್ಲಿ ಮತದಾರರಿಗೆ ಹಣ ಹಂಚುವ ವಿಡಿಯೋ ಒಂದು ವೈರಲ್ ಆಗಿದ್ದು ಚುನಾವಣಾ ಆಯೋಗ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.


ಇದನ್ನೂ ಓದಿ: ಬಿಹಾರಕ್ಕೆ ತೆರಳಲಿರುವ ಪ್ರಧಾನಿ: ಮೋದಿಗೆ 10 ಪ್ರಶ್ನೆಗಳನ್ನು ಕೇಳಿದ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights