ಕಲ್ಲಿದ್ದಲು ಹಗರಣ; ಬಿಜೆಪಿ ಮಾಜಿ ಸಚಿವ ದಿಲೀಪ್‌ ರೇ ಶಿಕ್ಷೆ ಅಮಾನತು!

ಕಲ್ಲಿದ್ದಲು ಹಗರಣದಲ್ಲಿ ಅಪರಾಧಿ ಎಂದು ಷೋಷಿಸಲ್ಪಟ್ಟ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಜೈಲು ಶಿಕ್ಷೆ ಅವಧಿಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದೆ.

ಸಿಬಿಐ ಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ದಿಲೀಪ್ ರೇ‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಒಪ್ಪಿರುವ ನ್ಯಾ. ಸುರೇಶ್‌ ಕುಮಾರ್‌ ಕೈತ್‌ ಅವರ ಏಕಸದಸ್ಯ ಪೀಠ, ”ಸದ್ಯದ ಮಟ್ಟಿಗೆ ಶಿಕ್ಷೆ ಅಮಾನತಿನಲ್ಲಿ ಇರಿಸಲಾಗುವುದು. ನ.23ಕ್ಕೆ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು” ಎಂದಿದ್ದಾರೆ.

ಕಲ್ಲಿದ್ದಲು ಹಗರಣದಲ್ಲಿ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರ 3 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿತ್ತು. ಈ ಶಿಕ್ಷೆಯ ಪ್ರಮಾಣವನ್ನು ದೆಹಲಿ ಹೈಕೋರ್ಟ್ ಅಮಾನತು ಮಾಡಿದೆ.

ಜಾರ್ಖಂಡ್ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವರಿಗೆ ದೆಹಲಿ ಸಿಬಿಐ ವಿಶೇಷ ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಜಾರ್ಖಂಡ್‌ನ ಗಿರಿದಿಹ್ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಯಾಕ್ ಅನ್ನು 1999ರಲ್ಲಿ ಕ್ಯಾಸ್ಪ್ಯಾನ್ ಟೆಕ್ನಾಲಜೀರ್ ಲಿಮೀಟಿಚ್‌ಗೆ ಅಕ್ರಮವಾಗಿ ಹಂಚಿಕೆ ಮಾಡಿರುವ ಪ್ರಕರಣ ಇದಾಗಿದೆ. ಜಾರ್ಖಂಡ್ ಕಲ್ಲಿದ್ದಲು ಗಣಿ ಮತ್ತು ನಿಕ್ಷೇಪಗಳ ಹಂಚಿಕೆಗೆ ಸಂಬಂಧಿಸಿದಂತೆ ಭಾರೀ ಪ್ರಮಾಣದ ಅಕ್ರಮ ಮತ್ತು ಅವ್ಯವಹಾರ ನಡೆದಿತ್ತು ಎಂದು ಆರೋಪಿಸಲಾಗಿತ್ತು.


ಇದನ್ನೂ ಓದಿ: ಬಿಹಾರ ಚುನಾವಣೆಯ ಮೇಲಿದೆ ಯಡಿಯೂರಪ್ಪ ಸಿಎಂ ಖುರ್ಚಿಯ ಭವಿಷ್ಯ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights