ಕೈ ಅಭ್ಯರ್ಥಿ ಮುದಿ ಎತ್ತು ಎಂದ ಬಿಜೆಪಿ: ಬಿಎಸ್‌ವೈ, ಮೋದಿ 2 ಹಲ್ಲಿನ ಎತ್ತುಗಳೇ ಎಂದ ಕಾಂಗ್ರೆಸ್‌!

ಲೋಕಸಭಾ ಚುನಾವಣೆಯಲ್ಲಿ ಸದ್ದುಮಾಡಿದ್ದ ಜೋಡೆತ್ತುಗಳ ಎಂಬ ಶಬ್ದ, ಈಗ ಉಪಚುನಾವಣೆಯ ಕಣದಲ್ಲೂ ಮುನ್ನೆಲೆಗೆ ಬಂದಿದೆ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಚಯಚಂದ್ರರನ್ನು ಬಿಜೆಪಿಗರು ಮುದಿ ಎತ್ತು ಎಂದು ಕರೆದಿದ್ದು, ಬಿಜೆಪಿ ನಾಯಕರು ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆಯಲಿ, ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ ರೀತಿ ಕರೆಯುವುದಿಲ್ಲ. ಮುಖ್ಯಮಂತ್ರಿಗಳ ವಯಸ್ಸನ್ನು ನಾವು ಗೌರವಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್‌ ಕೊಟ್ಟಿದ್ದಾರೆ.

ನಮ್ಮ ತಂದೆಗೆ ವಯಸ್ಸಾದಂತೆ ಅವರಿಗೂ ವಯಸ್ಸಾಗಿದೆ. ಜಯಚಂದ್ರ ಅವರಿಗೆ 71 ವರ್ಷ. ಇದೇ ಜಯಚಂದ್ರರ ಬಳಿಗೆ ಮೊನ್ನೆ ಬಿಜೆಪಿ ಮಂತ್ರಿಗಳನ್ನು ತರಬೇತಿ ತೆಗೆದುಕೊಂಡು ಬನ್ನಿ ಅಂತಾ ಬಿಜೆಪಿಯವರು ಹೇಳಿ ಕಳುಹಿಸಿದ್ದರು. ಜಯಚಂದ್ರ ಅವರು ಕಂದಾಯ ಸಚಿವರಿಗೆ 2 ಗಂಟೆ ಪಾಠ ಮಾಡಿ ಕಳುಹಿಸಿದ್ದಾರೆ. ಜಯಚಂದ್ರ ಅವರಿಗೆ ಅಷ್ಟು ಅನುಭವವಿದೆ. ಜಯಚಂದ್ರ ಅವರನ್ನು ಮುದಿ ಎತ್ತು, ತಮ್ಮ ಅಭ್ಯರ್ಥಿ ದುಡಿಯುವ ಎತ್ತು ಎಂದು ಹೇಳುತ್ತಾರೆ. ಅವರ ಅಭ್ಯರ್ಥಿ ಏನು ದುಡಿಮೆ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ನಾವು ಏನೆಂದು ಕರೆಯಬೇಕು? ಆದರೆ, ಅವರ ವಯಸ್ಸಿನ ಬಗ್ಗೆ ನಮೆಗೆ ಗೌರವವಿದೆ. ನಾವು ಹಾಗೆ ಕರೆಯುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯ ಯಡಿಯೂರಪ್ಪ, ಜೆಡಿಎಸ್‌ನ ದೇವೇಗೌಡರು ಏನು ಎಳಸು ಎತ್ತುಗಳೇ? ಪ್ರಧಾನಿ ನರೇಂದ್ರ ಮೋದಿ ಎರಡು ಹಲ್ಲು ಎತ್ತೇ? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಶಿರಾ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ? ವಿಡಿಯೋ ವೈರಲ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights