ಈದ್ ಪ್ರಾರ್ಥನೆಗೆ ಹೊರಟ ಫಾರೂಕ್ ಅಬ್ದುಲ್ಲಾಗೆ ತಡೆ: ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಎನ್‌ಸಿ ಆರೋಪ

ಈದ್ ಮಿಲಾದ್ ಪ್ರಯುಕ್ತ ಜಮ್ಮು ಕಾಶ್ಮೀರದ ಹಸರತ್ಬಾಲ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲು ಹೊರಟಿದ್ದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಜಮ್ಮು-ಕಾಶ್ಮೀರದ ಆಡಳಿತಾಧಿಕಾರಿಗಳು ನಿವಾಸದ ಬಳಿಯೇ ತಡೆಯೊಡ್ಡಿದ್ದಾರೆ. ಅಧಿಕಾರಗಳ ವರ್ತನೆಯು ಮೂಲಭೂತ ಹಕ್ಕುಗಳಿಗೆ ಚ್ಯುತಿ ತಂದಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷ ಆರೋಪಿಸಿದೆ.

ಡಾ ಫಾರೂಕ್ ಅಬ್ದುಲ್ಲಾ ಅವರ ನಿವಾಸವನ್ನು ಜಮ್ಮು-ಕಾಶ್ಮೀರ ಆಡಳಿತ ತಡೆದು ಅವರು ಹಸರತ್ಬಾಲ್ ದರ್ಗಾ ದಲ್ಲಿ ಪ್ರಾರ್ಥನೆ ಸಲ್ಲಿಸಲು ನಿವಾಸ ಬಿಟ್ಟು ಹೋಗದಂತೆ ಮಾಡಿದ್ದಾರೆ. ಮುಸ್ಲಿಮರ ಧಾರ್ಮಿಕ ಆಚರಣೆ ದಿನ ಪ್ರಾರ್ಥನೆ ಸಲ್ಲಿಸುವ ಮೂಲಭೂತ ಹಕ್ಕನ್ನು ಕಸಿದಿರುವ ಜಮ್ಮು-ಕಾಶ್ಮೀರ ಆಡಳಿತದ ಈ ಕ್ರಮವನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಟ್ವೀಟ್ ಮಾಡಿದೆ.

ಲೋಕಸಭೆಯಲ್ಲಿ ಶ್ರೀನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಫಾರೂಕ್ ಅಬ್ದುಲ್ಲಾ ಇಂದು ಈದ್ ಮಿಲಾದ್ ಪ್ರಯುಕ್ತ ದಾಲ್ ಸರೋವರ ತೀರದಲ್ಲಿರುವ ದರ್ಗಾಕ್ಕೆ ಭೇಟಿ ನೀಡಬೇಕಾಗಿತ್ತು. ಆದರೆ ಫಾರೂಕ್ ಅಬ್ದುಲ್ಲಾಗೆ ಅದು ಸಾಧ್ಯವಾಗಲಿಲ್ಲ.

ನಿನ್ನೆ ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಹಲವು ಪಿಡಿಪಿ ನಾಯಕರನ್ನು ಪೊಲೀಸರು ಬಂಧಿಸಿದ್ದರು.

ಫಾರೂಕ್ ಅಬ್ದುಲ್ಲಾ ಅವರಿಗೆ ತಡೆಯೊಡ್ಡಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷ ಆರೋಪಿಸಿದ್ದರೂ, ಆಡಳಿತ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.


ಇದನ್ನೂ ಓದಿ: ಶ್ರೀಲಂಕಾ ನೌಕಾಪಡೆಯಿಂದ ದಾಳಿ : ಓರ್ವ ತಮಿಳುನಾಡು ಮೀನುಗಾರನಿಗೆ ಗಾಯ…!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights