ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಗೆದ್ದರೆ ಮುನಿರತ್ನಗೆ ಸಚಿವ ಸ್ಥಾನ ಪಕ್ಕಾ- ಸಿಎಂ ಘೋಷಣೆ

ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ಕಣ ನಿರ್ಣಾಯಕ ಘಟ್ಟ ತಲುಪಿದೆ. ಇನ್ನು ಮತದಾನಕ್ಕೆ ಕೇವಲ ಮೂರು ದಿನ ಬಾಕಿ ಉಳಿದಿರುವುದು. ಮತಭೇಟೆಗಾಗಿ ಹಾಲಿ ಮತ್ತು ಮಾಜಿ ಸಿಎಂಗಳು ರಣರಂಗಕ್ಕಿಳಿದಿವೆ. ಜೊತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಕೆಲ ನಟ ನಟಿಯರು ಮತಯಾಚನೆ ಮಾಡಿದ್ದಾರೆ. ಈ ನಡುವೆ ಸಿಎಂ ಯಡಿಯೂರಪ್ಪ ಮಹತ್ವದ ಘೋಷಣೆ ಹೊರಡಿಸಿದ್ದಾರೆ.

ಆರ್ ಆರ್ ನಗರದಲ್ಲಿ ಮುನಿರತ್ನ ಜಯ ಸಾಧಿಸಿದರೆ ಅವರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ವತಃ ಅಖಾಡಕ್ಕಿಳಿದಿದ್ದು ಬಿಜೆಪಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರದ ಮತದಾರರನ್ನುದ್ದೇಶಿಸಿ ಮಾತನಾಡಿದ ಸಿಎಂ ಯಾವುದೇ ಜಾತಿ ರಾಜಕಾರಣ ಈ ಚುನಾವಣೆಯಲ್ಲಿ ನಡೆಯುವುದಿಲ್ಲ. ಒಕ್ಕಲಿಗ ಸಮುದಾಯದ ಸಚಿವರು ನಮ್ಮಲ್ಲಿ ಹೆಚ್ಚಾಗಿದ್ದಾರೆ. ಮುನಿರತ್ನ ಕೊರೊನಾ ಸಂದರ್ಭದಲ್ಲಿ ಚೆನ್ನಾಗಿ ಕೆಲಸ ಮಾಡಿದ್ದು 40 ಸಾವಿರ ಅಂತರ ಮತದಗಳಿಂದ ಗೆಲ್ಲುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಬಳಿಕ ದೆಹಲಿಗೆ ಹೋಗಿ ಹೈಕಮಾಂಡ್ ಜೊತೆಗೆ ಮಾತನಾಡುವುದಾಗಿ ಹೇಳಿದ ಯಡಿಯೂರಪ್ಪ ಮುನಿರತ್ನ ಗೆಲುವು ಸಾಧಿಸಿದರೆ 100ಕ್ಕೆ 100 ಸಚಿವ ಸ್ಥಾನ ನೀಡುವುದಾಗಿ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಸಂಪುಟ ವಿಸ್ತರಣೆನೋ? ಪುನಾರಚನೆಯೇ? ಕಾದು ನೋಡಬೇಕಿದೆ. ಹೈಕಮಾಂಡ್ ಹೇಗೆ ಹೇಳುತ್ತದೆ ಹಾಗೇಯೇ ಮಾಡುವುದು ಎಂದಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights