ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ನಡೆಸಿದ್ದ ನಟ ದರ್ಶನ್‌ ವಿರುದ್ಧ ದೂರು ದಾಖಲು

ನವೆಂಬರ್‌ 03ರಂದು ನಡೆಯಲಿರುವ ಆರ್ ಆರ್ ನಗರ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ ನಿರ್ಮಾಪಕ ಮುನಿರತ್ನ ಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಟ ದರ್ಶನ್ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದರು. ಈ ವೇಳೆ ದರ್ಶನ್ ಮತ್ತು ಇತರೆ ನಾಯಕರು ಕೋವಿಡ್ ನಿಯಮವಾಳಿಗಳನ್ನು ಪಾಲಿಸಿಲ್ಲ. ಸಾಮಾಜಿಕ ಅಂತರ ಪಾಲನೆ ಮಾಡದೇ ಪ್ರಚಾರ ನಡೆಸಿದ್ದರು ಎಂಬ ಆರೋಪದ ಮೇರೆಗೆ ದರ್ಶನ್ ವಿರುದ್ಧ ದೂರು ದಾಖಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ನಟ ದರ್ಶನ್ ಮತ್ತಿತ್ತರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.


ಇದನ್ನೂ ಓದಿ: ಕನ್ನಡ ಭಾಷಾ ಅಭಿವೃದ್ಧಿಗಾಗಿ ಕನ್ನಡ ಕಾಯಕ ವರ್ಷ ಆಚರಣೆ: ಸಿಎಂ ಯಡಿಯೂರಪ್ಪ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights