ನಟಿ ರಾಗಿಣಿ ಮತ್ತು ಸಂಜನಾ ಜಾಮೀನು ಅರ್ಜಿ ತಿರಸ್ಕಾರ: ಮುಂದುವರೆದ ಜೈಲು ವಾಸ!

ಸ್ಯಾಂಡಲ್‌ವುಡ್‌ನ ಹಲವು ನಟ-ನಟಿಯರು ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿದ್ದಾರೆ ಎಂದು ತನಿಖೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ತಿರಸ್ಕರಿಸಿದೆ.

ಜಾಮೀನು ಕೋರಿ ರಾಗಿಣಿ, ಸಂಜನಾ ಹಾಗೂ ಇತರೆ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಪೀಠ, ಅಕ್ಟೋಬರ್ 24 ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದರು.

ಇಂದು ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರು ಆರೋಪಿಗಳಿಗೆ ಜಾಮೀನು ನಿರಾಕರಿಸಿದ್ದಾರೆ. ಇದರಿಂದ ಜಾಮೀನು ನಿರೀಕ್ಷೆಯಲ್ಲಿದ್ದ ನಟಿಯವರಿಗೆ ತೀವ್ರ ನಿರಾಶೆಯಾಗಿದೆ.

ಕಳೆದ ಎರಡು ತಿಂಗಳಿಂದ ಜೈಲಿನಲ್ಲಿರುವ ನಟಿಯರು ಈಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.


ಇದನ್ನೂ ಓದಿ: ನಿರ್ಭಯ ಸಿಸಿಟಿವಿ ಅನುದಾನ: ಸಚಿವ ಸಂಪುಟಕ್ಕೆ ಮಂಡಿಸದೇ 667 ಕೋಟಿ ಟೆಂಡರ್‌ ಪ್ರಕ್ರಿಯೆ ಪೂರ್ಣ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights