ಇಂದು ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ…!

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇಬ್ಬರು ನಟಿಯರ ಜಾಮೀನು ವಿಚಾರಣೆಯನ್ನು ನಡೆ ಉಚ್ಚ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ. ಸುಮಾರು ಎರಡು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ನಟಿಯರಿಗೆ ಬಿಡುಗಡೆ ಭಾಗ್ಯ ಸಿಗುತ್ತಾ ಎನ್ನುವ ಕುತೂಹಲ ಹೆಚ್ಚಾಗಿದೆ.

ಬಂಧನ ದಿನದಿಂದಲೂ ಜಾಮೀನಿಗಾಗಿ ಹೋರಾಟ ನಡೆಸುತ್ತಿರುವ ನಟಿಯರು ಸಾಕಷ್ಟು ಸುದ್ದಿಯಲ್ಲಿದ್ದಾರೆ. ಸಂಜನಾ ಹಾಗೂ ರಾಗಿಣಿ ಬಂಧನ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದ ಮಾಸ್ಟರ್ ಗಳ ನಿದ್ದೆಗೆಡಿಸಿತ್ತು. ಮಾಫಿಯಾದಲ್ಲಿ ಭಾಗಿಯಾಗಿರುವವರಿಗೆ ಸಂಕಷ್ಟ ಶುರುವಾಗಿದೆ. ಇದರ ಬೆನ್ನಲ್ಲೆ ಇಬ್ಬರು ನಟಿಯರಿಗೆ ಜೈಲುವಾಸ ನಶೆಯನ್ನು ಇಳಿಸಿತ್ತು.

ಜಾಮೀನು ಅರ್ಜಿಗಳನ್ನು ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಜೊತೆಗೆ ಸಿಸಿಬಿ ನಟಿಯರಿಗೆ ಜಾಮೀನು ನೀಡದಂತೆ ಮನವಿ ಮಾಡಿತ್ತು. ಹೀಗಾಗಿ ನಟಿಮಣಿಯರಿಗೆ ಜಾಮೀನು ದೊರೆತಿರಲಿಲ್ಲ. ಆದರೆ ಪರಪ್ಪನ ಅಗ್ರಹಾರದಲ್ಲಿ ದಿನಕಳೆಯುತ್ತಿರುವ ನಟಿಯರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಇಂದು ಮದ್ಯಾಹ್ನ 2.30ಕ್ಕೆ  ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅವರನ್ನೊಳಗೊಂಡ ಏಕಸದಸ್ಯ ಪೀಠ ನಡೆಸಲಿದೆ. ಹೀಗಾಗಿ ಹೈ ಕೋರ್ಟ್ ತೀರ್ಪಿನ ಮೇಲೆ ಎಲ್ಲರ ಗಮನ ನೆಟ್ಟಿದೆ. ಒಂದು ವೇಳೆ ಜಾಮೀನು ನಿರಾಕರಣೆಯಾದರೆ ಮತ್ತೆ ನಟಿಯರಿಗೆ ಜೈಲು ಊಟವೇ ಗತಿ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights