ಬಿಹಾರ 2ನೇ ಹಂತದ ಮತದಾನ : ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಬಿಗಿ ಭದ್ರತೆ…

ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಈಗಾಗಲೇ ಪೂರ್ಣಗೊಂಡಿದೆ. ಇಂದು ನಡೆಯುತ್ತಿರುವ 2ನೇ ಹಂತದ ಮತದಾನದಲ್ಲಿ 17 ಜಿಲ್ಲೆಗಳ 94 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ನಿರ್ಣಾಯಕ ಘಟ್ಟ ತಲುಪಿದೆ. ಮತದಾರರು ಮತಗಟ್ಟೆಗಳಿಗೆ ಆಗಮಿಸುತ್ತಿದ್ದು, 2.85 ಕೋಟಿ ಜನ ಮತದಾರರು ಈ ಬಾರಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ತನಕ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕೊರೊನಾ ಕಾರಣದಿಂದಾಗಿ ಒಂದು ಗಂಟೆ ಮತದಾನದ ಸಮಯ ಹೆಚ್ಚಿಸಿದ್ದು ಕೊನೆಯ ಒಂದು ಗಂಟೆ ಅವಧಿಯಲ್ಲಿ ಕೊರೊನಾ ಸೋಂಕಿತರು ಹಕ್ಕು ಚಲಾಯಿಸಬಹುದು. ಮತಗಟ್ಟೆಗಳಲ್ಲಿ ಪೊಲೀಸ್ ಬಿಗಿಭದ್ರತೆ ಏರ್ಪಡಿಸಲಾಗಿದ್ದು, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಭದ್ರತೆ ಇನ್ನಷ್ಟು ಬಿಗಿಗೊಳಿಸಲಾಗಿದೆ.

ಬಿಹಾರ 2ನೇ ಹಂತದ ಚುನಾವಣೆಯ ಕಣದಲ್ಲಿ 1463 ಅಭ್ಯರ್ಥಿಗಳು ಸ್ಫರ್ಥಿಸಲಿದ್ದಾರೆ. ಇವರಲ್ಲಿ 1316 ಪುರುಷ ಅಭ್ಯರ್ಥಿಗಳಿದ್ದು 146 ಮಹಿಳಾ ಅಭ್ಯರ್ಥಿಗಳಿದ್ದು ಒಬ್ಬ ತೃತೀಯ ಲಿಂಗಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎರಡನೇ ಹಂತದ ಮತದಾನದಲ್ಲಿ ಒಟ್ಟು 2,85,50,285 ಜನ ಮತದಾರರು ಮತದಾನ ಮಾಡಲಿದ್ದಾರೆ. ಈ ಪೈಕಿ 1,50,33,034 ಪುರುಷರು ಮತ್ತು 1,35,16,271 ಮಹಿಳಾ ಮತದಾರರು ಹಾಗೂ 980 ತೃತೀಯ ಲಿಂಗದ ಮತದಾರರು ಮತದಾನ ಮಾಡಲಿದ್ದಾರೆ.

ಇನ್ನೂ 3ನೇ ಹಂತದ ಮತದಾನದಲ್ಲಿ 15 ಜಿಲ್ಲೆಗಳ 78 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನವೆಂಬರ್ 10 ರಂದು ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಕೊರೊನಾ ಮಧ್ಯೆ ಮತದಾನಕ್ಕೆ ಆತಂಕ ಬೇಡ ಎಂದ ಚುನಾವಣಾ ಆಯೋಗ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಾರ್ಗ ಸೂಚಿ ಪ್ರಕಾರಣ ಒಂದು ಮತಗಟ್ಟೆಯಲ್ಲಿ 1600 ರಿಂದ 1000 ಮತದಾರರಿಗೆ ಹಕ್ಕು ಚಲಾಯಿಸುವುದಕ್ಕಷ್ಟೇ ಅನುಮತಿ ನೀಡಲಾಗಿದೆ. 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಪೋಸ್ಟರ್ ಕಾರ್ಡ್ ಮೂಲಕ ಮತದಾನ ಮಾಡುವುದಕ್ಕೆ ಅನುಮತಿ ನೀಡಲಾಗಿದೆ. ಓಟಿಂಗ್ ಮಷೀನ್ ಸ್ಯಾನಿಟೈಸರ್ ಮಾಡುವುದು. ಮಾಸ್ಕ್ ಧರಿಸುವುದು, ಥರ್ಮಲ್ ಸ್ಕ್ಯಾಆನಿಂಗ್ ಕೈತೊಳೆಯಲು ನೀರಿನ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯವಾಗಿದೆ.

ಇನ್ನೂ ರಘೋಪುರ ಕ್ಷೇತ್ರದಲ್ಲಿ ಪ್ರತಿಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಸ್ಪರ್ಧಿಸಲಿದ್ದಾರೆ. ಇದು ಪಾರಂಪರಿಕವಾಗಿ ಆರ್ ಜೆಡಿ ಭದ್ರಕೋಟೆಯೂ ಆ್ಇದ್ದು 1995,2000ರ ಚುನಾವಣೆಯಲ್ಲಿ ಲಾಲೂ ಪ್ರಸಾದ್ ಯಾದವ್ ಇಲ್ಲಿ ಗೆದ್ದಿದ್ದರು. ಜೊತೆಗೆ ಪಾಟ್ನಾ ಸಾಹೀಬ್ ಕ್ಷೇತ್ರ ಬಿಜೆಪಿ ಪಾಲಿಗೆ ಮಹತ್ವದ್ದಾಗಿದ್ದು, ಇಲ್ಲಿಂದ ಬಿಜೆಪಿ ಮಂತ್ರಿ ನಂದ ಕಿಶೋರ್ ಯಾದವ್ ಸತತ ಏಳನೇ ಸಲ ಮರು ಆಯ್ಕೆ ಬಯಸಿದ್ದಾರೆ. ಅಕ್ಟೋಬರ್ 28ರಂದು ಮೊದಲ ಹಂತದ ಮತದಾನ ನಡೆದಿತ್ತು. ಮೂರನೇ ಹಂತದ ಮತದಾನ ನವೆಂಬರ್ 7 ರಂದು ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights