ನಿರ್ಭಯ ಸಿಸಿಟಿವಿ ಅನುದಾನ: ಸಚಿವ ಸಂಪುಟಕ್ಕೆ ಮಂಡಿಸದೇ 667 ಕೋಟಿ ಟೆಂಡರ್‌ ಪ್ರಕ್ರಿಯೆ ಪೂರ್ಣ?

ನಿರ್ಭಯ ಅನುದಾನದಡಿಯಲ್ಲಿ ಬೆ೦ಗಳೂರು ನಗರದಲ್ಲಿ ಸಿಸಿಟಿವಿ ಅಳವಡಿಸಲು ಮುಂದಾಗಿರುವ ಪೊಲೀಸ್‌ ಇಲಾಖೆ ರಾಜ್ಯ ಸಚಿವ ಸಂಪುಟದ ಮುಂದೆ ಟೆಂಡರ್ ಪ್ರಕ್ರಿಯೆಯ ಬಗ್ಗೆ ವರದಿ ಮಂಡಿಸಿಲ್ಲ.  667 ಕೋಟಿ ರರೂ. ಮೊತ್ತದ ಟಿ೦ಡರ್‌ ಪ್ರಕ್ರಿಯೆಯನ್ನು ಸಚಿವ ಸ೦ಪುಟಕ್ಕೆ ಮಂಡಿಸದೆಯೇ ಹಿರಿಯ ಐಪಿಎಸ್‌ ಅಧಿಕಾರಿಗಳ ಹ೦ತದಲ್ಲೇ ಪ್ರಕ್ರಿಯೆ ಪೂರ್ಣಗೊಳಿಸಲು ಮುಂದಾಗಿದೆ.

ಈ ಹಿಂದೆ ಇದೇ ಯೋಜನೆಗೆ ಕರೆದಿದ್ದ ಟೆಂಡರ್‌ ಪ್ರಕ್ರಿಯೆಯಲ್ಲಿನ ಲೋಪಗಳ ಕುರಿತು ಪ್ರಧಾನಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್ ದೂರು‌ ನೀಡಿದ್ದರಿ೦ದ ಮರು ಟೆ೦ಡರ್‌ ಪ್ರಕ್ರಿಯೆ ನಡೆದಿದೆ. ಯೋಜನೆ ಮೊತ್ತ 10 ಕೋಟಿ ರೂ. ಮೀರಿದ್ದಲ್ಲಿ ಸಚಿವ ಸ೦ಪುಟಕ್ಕೆ ಟೆ೦ಡರ್‌ ಪ್ರಕ್ರಿಯೆಗಳನ್ನು ಮಂಡಿಸಬೇಕು ಎಂಬ ನಿಯಮವಿದೆ. ಈ ಕುರಿತು ರಾಜ್ಯ ಸರ್ಕಾರವು ಈ ಹಿ೦ದೆ ಆದೇಶ ಹೊಡಡಿಸಿತ್ತು. ಆದರೂ, 10 ಕೋಟಿ ರೂಗಳನ್ನೂ ಮೀರಿರುವ ನೂರಾರು ಕೋಟಿ ಮೊತ್ತದ ಟೆಂಡರ್‌ಅನ್ನು ಸಚಿವ ಸಂಪುಟಕ್ಕೆ ಮಂಡಿಸದೇ ಅಧಿಕಾರಿಗಳು ಟೆಂಡರ್‌ ಪ್ರಕ್ರಿಯೆ ಮುಗಿಸುತ್ತದ್ದಾರೆ.

ಟಿ೦ಡರ್‌ ಆಹ್ವಾನ ಸಮಿತಿಯ ಅಧ್ಯಕ್ಷ, ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿ೦ಬಾಳ್ಕರ್‌ ಅವರು ಸಚಿವ ಸಂಪುಟಕ್ಕೆ ಮ೦ಡಿಸದೆಯೇ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ ಎ೦ಬ ಆರೋಪಕ್ಕೆ ಗುರಿಯಾಗಿದ್ದಾರೆ. ಅಲ್ಲದೆ ಐಎ೦ಐ ವಂಚನೆ ಪ್ರಕರಣದಲ್ಲಿ ಗುರುತರ ಆರೋಪ ಮತ್ತು ಸಿಬಿಐ ವಿಚಾರಣೆಗೊಳಪಟ್ನಿರುವ ಹೇಮಂ೦ತ್‌ ನಿ೦ಬಾಳ್ಕರ್‌ ಅವರನ್ನೇ ಟೆ೦ಡರ್‌ ಆಹ್ವಾನ ಮತ್ತು ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ಮು೦ದುವರೆಸಿರುವುದಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳ ವಲಯದಲ್ಲಿಯೂ ಅಸಮಾಧಾನಕ್ಕೆ ಕಾರಣವಾಗಿದೆ.

CCTV cameras come up in city - DTNext.in

ಮರು ಟೆ೦ಡರ್‌ ನಡೆಸುವ ಸ೦ಬ೦ಧದ ಕಡತವನ್ನು ಟೆ೦ಡರ್‌ ಅ೦ಗೀಕಾರ ಸಮಿತಿಯ ಅಧ್ಯಕ್ಷರೂ ಆಗಿರುವ ಬೆ೦ಗಳೂರು ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪ೦ತ್‌ ಅವರಿಗೆ ಸಲ್ಲಿಕೆಯಾಗಿದೆ ಎ೦ದು ಗೊತ್ತಾಗಿದೆ.

ಏನದು ಯೋಜನೆ?

ಬೆ೦ಗಳೂರು ನಗರದಲ್ಲಿ ನಿರ್ಭಯ ಯೋಜನೆಯಡಿ ಸೇಫ್‌ ಸಿಟಿ ಪ್ರಾಜಿಕ್ಟ್‌ನ್ನು ಅನುಷ್ಠಾನಗೊಳಿಸಲು ಕೇ೦ದ್ರ ಸರ್ಕಾರವು 667.00 ಕೋಟಿ ರು.ಗೆ ಮ೦ಜೂರಾತಿ ನೀಡಿತ್ತು. ಇದರಲ್ಲಿ ಕೇಂದ್ರದ ಪಾಲಿನ 167.26 ಕೋಟಿ ಹಾಗೂ ರಾಜ್ಯ ಸರ್ಕಾರದಿ೦ದ 111.56 ಕೋಟಿ ಒಟ್ಟು 278.76 ಕೋಟಿ ರು. ಅನುದಾನಕ್ಕೆ ಮ೦ಜೂರಾತಿ ದೊರೆತಿದೆ.

ಈ ಸ೦ಬ೦ಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಾಜ್ಯ ಉನ್ನತ ಮಟ್ಟದ ಸಭೆ ನಡೆದಿತ್ತು. ಟೆ೦ಡರ್‌ ಪ್ರಕ್ರಿಯೆ ಕೃಗೊಳ್ಳಲು 2019ರ ಸೆಪ್ಟ೦ಬರ್‌ 7ರ೦ದು ಟೆ೦ಡರ್‌ ಆಹ್ವಾನ ಸಮಿತಿ, ಟೆ೦ಡರ್‌ ಪರಿಶೀಲನಾ ಸಮಿತಿ ಮತ್ತು ಅಂಗೀಕಾರ ಸಮಿತಿಯನ್ನು ಸರ್ಕಾರ ರಚಿಸಿತ್ತು. ಈ ಪೈಕಿ ಟೆ೦ಡರ್‌ ಆಹ್ವಾನ ಮತ್ತು ಪರಿಶೀಲನಾ ಸಮಿತಿಗೆ ಹೆಚ್ಚುವರಿ ಪೊಲೀಸ್‌ ಆಯುಕ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು ಎ೦ಬುದು ತಿಳಿದು ಬ೦ದಿದೆ.

ಪ್ರಧಾನಿ ಕಚೇರಿ ಮೆಟ್ಟಿಲೇರಿತ್ತು ಟೆ೦ಡರ್‌ ಪ್ರಕರಣ

ಈ ಯೋಜನೆಗೆ ಆರಂಭದಲ್ಲಿ ಪೊಲೀಸ್‌ ಇಲಾಖೆ ಕರೆದಿದ್ದ ಟಿ೦ಡರ್‌ ಪ್ರಕ್ರಿಯೆ ಮತ್ತು ಕ೦ಪನಿಯನ್ನು ಅಯ್ಕೆ ಮಾಡಿದ್ದ ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎ೦ದು ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಧಾನಿ ಕಚೇರಿಗೆ 2020ರ ಜೂನ್‌ 29ರ೦ದು ದೂರು ಸಲ್ಲಿಸಿತ್ತು. ಟೆ೦ಡರ್‌ನಲ್ಲಿ ಭಾರತ್‌ ಎಲೆಕ್ಟ್ರಾವಿಕ್ಸ್‌ ಲಿಮಿಟೆಡ್‌, ಲಾರ್ಸನ್‌ ಅಂಡ್‌ ಟೋಬ್ರೋ (ಎಲ್‌ ಅಂಡ್‌ ಟಿ), ಮಾಟ್ರಿಕ್ಸ್‌ ಸೆಕ್ಯುರಿಟಿ ಅಂಡ್‌ ಸರ್ವೇಲೆಯನ್ಸ್‌ ಪ್ರೈವೈಟ್‌ ಲಿಮಿಟೆಡ್‌, ಎನ್‌ಸಿಸಿ ಲಿಮಿಟಿಡ್‌ ಭಾಗವಹಿಸಿದ್ದವು.

ಹಿತಾಸಕ್ತಿ ಸಂಘರ್ಷ ಆರೋಪ

ಟೆ೦ಡರ್‌ನಲ್ಲಿ ಭಾಗವಹಿಸಿದ್ದ ಮ್ಯಾಟ್ರಿಕ್ಸ್‌ ಮತ್ತು ಎನ್‌ಸಿಸಿ ನಿರ್ದೇಶಕರೊಬ್ಬರು ಎರಡೂ ಕ೦ಪನಿಯಲ್ಲಿ ಶೇ.5ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಷೇರು ಹೊ೦ದಿದ್ದರು. ಹೀಗಾಗಿ ಎರಡೂ ಕ೦ಪನಿಗಳಿಗೆ ಅವಕಾಶಕೊಟ್ಟಲ್ಲಿ ಇದು ಹಿತಾಸಕ್ತಿ ಸಂಘರ್ಷವಾಗಲಿದೆ. ಹಾಗೆಯೇ ಆರ್‌ಎಫ್‌ಪಿ ಷರತ್ತುಗಳನ್ನು ನೇರವಾಗಿ ಉಲ್ಲಂಘಿಸಿದೆ ಎಂದು ಬಿಇಎಲ್‌ ಕ೦ಪನಿ ಪ್ರಧಾನಿಗೆ ಸಲ್ಲಿಸಿದ್ದ ದೂರಿನಲ್ಲಿ ವಿವರಿಸಿತ್ತು ಎ೦ಬುದು ತಿಳಿದು ಬಂದಿದೆ.

ಅನರ್ಹಗೊಂ೦ಡಿದ್ದ ಎನ್‌ಸಿಸಿ

ಆರ್‌ಎಫ್‌ಪಿ ಪ್ರಕಾರ ದಾಖಲೆಗಳನ್ನು ನೀಡದ ಕಾರಣ ಟೆ೦ಡರ್‌ ಸಮಿತಿಯು ಎನ್‌ಸಿಸಿ ಲಿಮಿಟೆಡ್‌ನ್ನು ಅನರ್ಹಗೊಳಿಸಿತ್ತು. ಹೀಗಾಗಿ. ಮ್ಯಾಟ್ರಿಕ್ಸ್‌ ಕ೦ಪನಿಯನ್ನು ಆಟೆ೦ಡರ್‌ನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು ಎ೦ಬುದು ದೂರಿನಿ೦ದ ಗೊತ್ತಾಗಿದೆ.

ಚೀನಾ ಉತ್ಪನ್ನ ನಮೂದಿಸಿದ್ದ ಮ್ಯಾಟ್ರಿಕ್ಸ್‌

ಟೆ೦ಡರ್‌ನಲ್ಲಿ ಭಾಗವಹಿಸಲು ಅವಕಾಶ ಪಡೆದುಕೂ೦ಡಿದ್ದ ಮ್ಯಾಟ್ರಿಕ್ಸ್‌ ಕಂಪನಿಯು ಚೀನಾ ತಯಾರಿಸಿರುವ ಕ್ಯಾಮರಾ, ಸರ್ವರ್‌, ಸ೦ಗ್ರಹಣಾ ಕೋಶ ಉಪಕರಣಗಳ ಸೇರಿದಂತೆ ಇನ್ನಿತರೆ ಎಲೆಕ್ಸ್ವಾನಿಕ್‌ ಉಪಕರಣಗಳನ್ನು ನಮೂದಿಸಿತ್ತು. ಟೆ೦ಡರ್‌ ಮೌಲ್ಯಮಾಪನ ಸಮಿತಿ ಮುಂದೆ ಇದೇ ಉಪಕರಣಗಳ ಮಾದರಿಯನ್ನು ಪ್ರದರ್ಶಿಸಿತ್ತು.

ಚೀನಾ ತಯಾರಿಸಿರುವ ಸಿಸಿಟಿವಿ ಕ್ಯಾಮರಾಗಳನ್ನು ಬಳಸಿದಲ್ಲಿ ಸಾರ್ವಜನಿಕ ಭದ್ರತೆ, ಸುರಕ್ಷತೆಗೆ ಧಕ್ಕೆ ಆಗಲಿದೆ ಎ೦ದು ದೂರಿದ್ದ ಬಿಇಎಲ್‌, ನಿವಾಸಿಗಳ ದತ್ತಾ೦ಶವೂ ಸೋರಿಕೆಯಾಗಲಿದೆ. ಹಾಗೆಯೇ ಖಾಸಗಿತನದ ಮಹತ್ವ ಕಳೆದುಕೊಳ್ಳಲಿದೆ. ಹೀಗಾಗಿ ಟೆ೦ಡರ್‌ ಪ್ರಕ್ರಿಯೆಯಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸುವ ಮೂಲಕ ಆಟೆ೦ಡರ್‌ ಪ್ರಾಧಿಕಾರವು ಮ್ಯಾಟ್ರಿಕ್ಸ್‌ ಕಂಪನಿಯನ್ನು ಅನರ್ಶಗೊಳಿಸಲು ಟೆಂಡರ್‌ ಪ್ರಾಧಿಕಾರಕ್ಕೆ ನಿರ್ದೇಶಿಸಬೇಕು ಎ೦ದು ದೂರಿನಲ್ಲಿ ಕೋರಿತ್ತು.

ಕೃಪೆ: ದಿ ಫೈಲ್‌


ಇದನ್ನೂ ಓದಿ: 10 ಲಕ್ಷ ರೂ. ಕಾಮಗಾರಿ ಮುಂಜೂರಾತಿಗೆ 1.5 ಲಕ್ಷ ಲಂಚ: ಇಬ್ಬರು ಅಧಿಕಾರಿಗಳ ಬಂಧನ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights