ನಕಲಿ ಟಿಆರ್ಪಿ ಹಗರಣ : ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಅರ್ನಬ್ ಗೋಸ್ವಾಮಿ ಬಂಧನ..!
ನಕಲಿ ಟಿಆರ್ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಹಾಗೂ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ನಡುವಿನ ಸಮರ ತಾರಕಕ್ಕೇರಿದೆ. ಬುಧವಾರ ಬೆಳಿಗ್ಗೆ ಅರ್ನಬ್ ಗೋಸ್ವಾಮಿ ಅವರ ಮನೆಗೆ ನುಗ್ಗಿದ ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಬಂಧನದ ವೇಳೆ ಪೊಲೀಸರು ತಮ್ಮ ಮೇಲೆ ಹಾಗೂ ಮಗನ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಅರ್ನಬ್ ಆರೋಪಿಸಿದ್ದಾರೆ.
2018ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆ ಪ್ರಕರಣವೊಂದನ್ನು ಪುನ: ತೆರೆದಿರುವ ಪೊಲೀಸರು, ಆ ಪ್ರಕರಣಕ್ಕೆ ಸಂಬಂದಿಸಿದಂತೆ ಅರ್ನಬ್ ಅವರನ್ನು ಬಂಧಿಸಿದ್ದಾರೆ. 2 ವರ್ಷದ ಹಿಂದಿನ ಅರ್ನಬ್ ಗೋಸ್ವಾಮಿ ವಿರುದ್ಧದ ಪ್ರಕರಣವನ್ನು ಸ್ಥಗಿತಗೊಳಿಸಿದ್ದರು. ಈಗ ಅದನ್ನು ಮತ್ತೆ ತೆರೆಯಲಾಗಿದೆ.
ಇಂದು ಬೆಳಗ್ಗೆ ಮುಂಬೈಯಲ್ಲಿರುವ ಅರ್ನಬ್ ಗೋಸ್ವಾಮಿ ನಿವಾಸಕ್ಕೆ ಹಠಾತ್ ದಾಳಿ ನಡೆಸಿದ ಮುಂಬೈ ಪೊಲೀಸರು ಅವರನ್ನು ಬಂಧಿಸಲು ಯತ್ನಿಸಿದರು. ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ಪೊಲೀಸರು ಯತ್ನಿಸಿದರು. ಅಲ್ಲದೆ ತಮ್ಮ ಪತ್ನಿ, ಪುತ್ರ, ಅತ್ತೆ ಮಾವಂದಿರ ಮೇಲೆ ಕೂಡ ಹಲ್ಲೆ ನಡೆಸಲು ಯತ್ನಿಸಿದರು. ರಿಪಬ್ಲಿಕ್ ಟಿವಿಯಲ್ಲಿ ಬರುತ್ತಿರುವ ವಿಡಿಯೋ ಪ್ರಸಾರದಲ್ಲಿ ಪೋಲೀಸರು ಅರ್ನಬ್ ಗೋಸ್ವಾಮಿ ಮೇಲೆ ಹಲ್ಲೆ ನಡೆಸುತ್ತಿದ್ದಾರೆ.
ನಂತರ ಪೊಲೀಸ್ ವ್ಯಾನಿನಲ್ಲಿ ಅರ್ನಬ್ ಗೋಸ್ವಾಮಿಯವರನ್ನು ಬಂಧಿಸಿ ಕರೆದುಕೊಂಡು ಹೋಗಲಾಗುತ್ತಿದೆ.
#WATCH Republic TV Editor Arnab Goswami detained and taken in a police van by Mumbai Police, earlier today pic.twitter.com/ytYAnpauG0
— ANI (@ANI) November 4, 2020

