ವಿದ್ಯುತ್ ಬಿಲ್ ಏರಿಕೆ ವಿರುದ್ಧ ಮಾಜಿ ಸಿಎಂ ಹೆಚ್ಡಿಕೆ ಗರಂ : ದರ ಏರಿಕೆ ಕೈಬಿಡುವಂತೆ ಆಗ್ರಹ!

ಕೊರೊನಾ ಆರ್ಥಿಕ ಸಂಕಷ್ಟದಲ್ಲಿ ರಾಜ್ಯದ ಜನತೆಗೆ ಸದ್ಯ ಸರ್ಕಾರ ವಿದ್ಯುತ್ ಬಿಲ್ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರದ ಈ ನಡೆಯನ್ನು ಜನ ಖಂಡಿಸಿದ್ದಾರೆ. ಮಾತ್ರವಲ್ಲದೇ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸರ್ಕಾರದ ನಿರ್ಧಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಮಹಾಮಾರಿ ಕೊರೊನಾದಿಂದಾಗಿ ಜನ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಪ್ರವಾಹದಿಂದಾಗಿ ರಾಜ್ಯದ ಭಾಗಶ: ಜಿಲ್ಲೆಗಳ ಜನ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ರಾಜ್ಯ ಸರ್ಕಾರ ಜನರ ನೆರವಿಗೆ ನಿಲ್ಲುವ ಬದಲು ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿದೆ ಎಂದು ಮಾಜಿ ಸಿಎಂ ಕುಮಾಸ್ವಾಮಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರವನ್ನು ದೂರಿದ್ದಾರೆ.

ಪ್ರತಿ ಯೂನಿಟ್ ಗೆ 20 ಪೈಸೆಯಿಂದ 50 ಪೈಸೆ ವರೆಗೆ ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಹೊರೆಯಾಗಿದೆ. ಈಗಾಗಲೇ ಸಾಂಕ್ರಮಿ ರೋಗದಿಂದಾಗಿ ಉದ್ಯೋಗ ಸಂಬಳ ಕಳೆದುಕೊಂಡ ಜನರಿಗೆ ಇದು ಭಾರೀ ಹೊಡೆತ ಕೊಡಲಿದೆ. ಹೀಗಾಗಿ ಸರ್ಕಾರ ಕನಿಷ್ಠ ಒಂದು ವರ್ಷಗಳ ಕಾಲ ದರ ಏರಿಕೆ ವಿಚಾರವನ್ನು ಕೈಬಿಡಬೇಕು ಎಂದು ಹೆಚ್ ಡಿಕೆ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ರಾಜ್ಯ ಸರ್ಕಾರದ ಆದೇಶದಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವಿದ್ಯುತ್ ದರ ಏರಿಕೆ ಮಾಡಿದೆ. ಈ ಪರಿಷ್ಕೃತ ದರ ನವೆಂಬರ್ 1ರಿಂದಲೇ ಅನ್ವಯವಾಗಿದೆ. ಈ ವರ್ಷ ಮಾರ್ಚ್ ತಿಂಗಳಿನಲ್ಲೇ ವಿದ್ಯುತ್ ದರ ಏರಿಕೆಯಾಗಬೇಕಿತ್ತು. ಕೊರೊನಾದಿಂದಾಗಿ ವಿದ್ಯುತ್ ದರ ಏರಿಕೆ ವಿಚಾರ ಮುಂದೂಡಲಾಗಿತ್ತು. ಆದರೆ ಈ ಕೆಇಆರ್ ಸಿ ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಳ ಮಾಡಿ ವಿದ್ಯುತ್ ದರ ಏರಿಕೆ ಮಾಡಿ ಜನರಿಗೆ ಶಾಕ್ ಕೊಟ್ಟಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights