ಅಮೆರಿಕಾ ಚುನಾವಣೆ: ಹೆಚ್ಚು ಮತಗಳನ್ನು ಪಡೆದು ಇತಿಹಾಸ ನಿರ್ಮಿಸಿದ ಬೈಡನ್!

ಅಮೆರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ಬೈಡನ್‌ ಅವರು 70.7 ಮಿಲಿಯನ್‌ಗೂ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಅಮರಿಕಾ ಅಧ್ಯಕ್ಷೀಯ ಚುನಾವಣೆಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಮತಗಳನ್ನು ಪಡೆದ ಅಭ್ಯರ್ಥಿ ಎಂದು ಹೇಳಲಾಗಿದೆ.

ಈ ಹಿಂದೆ ಅಮೆರಿಕಾ ಅಧ್ಯಕ್ಷರಾಗಿದ್ದ ಬರಾಕ್‌ ಒಬಾಮ ಅವರು ಹೆಚ್ಚು ಮತಗಳನ್ನು ಪಡೆದು ದಾಖಲೆ ನಿರ್ಮಿಸಿದ್ದರು. ಅವರ ದಾಖಲೆಯನ್ನೂ ಮುರಿದಿರುವ ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಅತಿ ಹೆಚ್ಚು ಮತಗಳನ್ನು ಪಡೆದಿದ್ದಾರೆ ಎಂದು ನ್ಯಾಶನಲ್ ಪಬ್ಲಿಕ್ ರೇಡಿಯೊ(ಎನ್‌ಪಿಆರ್)ವರದಿ ಮಾಡಿದೆ.

2008ರಲ್ಲಿ ಒಬಾಮ ಅವರು 69,498,516 ಮತಗಳನ್ನು ಪಡೆದು ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಬೈಡೆನ್ ಮುರಿದಿದ್ದಾರೆ. ಇನ್ನೂ ಡೊನಾಲ್ಡ್‌ ಟ್ರಂಪ್‌ ಅವರು 67.32 ಮಿಲಿಯನ್ ಮತಗಳನ್ನು ಪಡೆದುಕೊಂಡಿದ್ದಾರೆ.


ಇದನ್ನೂ ಓದಿ: ಟ್ರಂಪ್ ಎಂದರೆ ಟ್ರಂಪ್ ಮಾತ್ರವಲ್ಲ! ಅಮೆರಿಕಾ ಗೆಲುವು ಮತ್ತು ಸೋಲಿನ ಕಂದಕಗಳೇನು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights