ನನ್ನ ಜನರ ಸಾಂವಿಧಾನಿಕ ಹಕ್ಕುಗಳನ್ನು ಮರಳಿ ಪಡೆಯದೇ ನಾನು ಸಾಯುವುದಿಲ್ಲ: ಫಾರೂಖ್ ಅಬ್ದುಲ್ಲಾ

ನನ್ನ ರಾಜ್ಯದ ಜನರ ಸಾಂವಿಧಾನಿಕ ಹಕ್ಕುಗಳನ್ನು ಮರಳಿ ಪಡೆಯುವವರೆಗೂ ನಾನು ಸಾಯುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ.

ಬಿಜೆಪಿ ದೇಶದ ಹಾದಿ ತಪಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಯಾಮಾರಿಸುತ್ತಿದೆ. ಸುಳ್ಳು ಆಶ್ವಾಸನೆಗಳಿಂದ ರಾಜ್ಯದ ಜನರ ಹಕ್ಕುಗಳನ್ನು ಕಸಿದುಕೊಂಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ರಾಜ್ಯದ ಜನರಿಗೆ ಹಕ್ಕುಗಳನ್ನು ಮರಳಿ ಪಡೆಯುವವರೆಗೂ ನಾನು ಸಾಯುವುದಿಲ್ಲ. ಜನರಿಗೆ ಏನಾದರೂ ಮಾಡಲು ನಾನು ಇಲ್ಲಿದ್ದೇನೆ. ನನ್ನ ಕೆಲಸವನ್ನು ಮುಗಿಸುವ ದಿನ ಈ ಜಗತ್ತನ್ನು ತೊರೆಯುತ್ತೇನೆ ಎಂದು ಹೇಳಿದ್ದಾರೆ.

ಸಂವಿಧಾನದ 370ನೇ ವಿಧಿ ರದ್ದತಿ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ 370 ವಿಧಿಯಲ್ಲಿ ಮರಳಿ ತರಬೇಕೆಂದು 84 ವರ್ಷದ ಅಬ್ದುಲ್ಲಾ ಅವರು ಹೋರಾಟ ನಡೆಸುತ್ತಿದ್ದು, ಪ್ರಾದೇಶಿಕ ಪಕ್ಷಗಳೊಂದಿಗೆ ಗುಪ್ಚರ್ ಅಲೈಯನ್ಸ್‌ ರಚಿಸಿ ಮುನ್ನಡೆಸುತ್ತಿದ್ದಾರೆ.


ಇದನ್ನೂ ಓದಿ: ವಿಧಿ 370 ಮರು ಸ್ಥಾಪನೆ ಬಗ್ಗೆ ಸುಪ್ರೀಂಕೋರ್ಟ್‌ ಏನು ಹೇಳುತ್ತದೆಂದು ಈಗಲೇ ಊಹಿಸಬೇಡಿ: ಓಮರ್ ಅಬ್ದುಲ್ಲಾ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights