ಕಾಂಗ್ರೆಸ್ ಸೇರಿಕೊಳ್ಳುವುದಾಗಿ ಟ್ವೀಟ್ ಮಾಡಿದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್!

2019ರ ಸೆ.6 ರಂದು ಕೇಂದ್ರ ಸರ್ಕಾರದ ನೀತಿಗಳಿಂದ ಬೇಸತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ದೂರಿ ಐಎಎಸ್ ಸೇವೆಗೆ ರಾಜೀನಾಮೆ ಸಲ್ಲಿಸಿದ ಸಸಿಕಾಂತ್ ಸೆಂಥಿಲ್ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ.

ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ನಾಳೆ ಬೆಳಿಗ್ಗೆ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ಸೆಂಥಿಲ್ ಅವರೇ ಟ್ವೀಟ್ ಮಾಡಿದ್ದಾರೆ.

ರಾಜೀನಾಮೆ ಬಳಿಕ ಸಸಿಕಾಂತ್ ಅವರು ಸಿಎಎ, ಎನ್ ಆರ್ ಸಿ ವಿರುದ್ಧ ಪ್ರತಿಭಟನೆಯಲ್ಲಿ ಸಕ್ರಿಯವಾಗಿದ್ದರು. ತಮಿಳುನಾಡಿನವರಾದ ಸೆಂಥಿಲ್ ಇದೀಗ ಚೆನ್ನೈನಲ್ಲಿ ತಂಗಿದ್ದಾರೆ. ತಮಿಳುನಾಡಿನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಸಲಿದ್ದು, ಸಸಿಕಾಂತ್ ಸೆಂಥಿಲ್ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭಯರ್ಥಿಯಾಗಿ ಅಖಾಡಕ್ಕಿಳಿಯುವ ಸಾಧ್ಯತೆಗಳು ಕೂಡ ಇದೆ.

ಸೂಕ್ಷ್ಮ ಸಂವೇದನೆಗಳನ್ನೊಳಗೊಂಡ ದಕ್ಷ ಅಧಿಕಾರಿ ಎಂಬ ಕಾರಣಕ್ಕಾಗಿ ಸಸಿಕಾಂತ್ ಸೆಂಥಿಲ್ ಜಿಲ್ಲಾಧಿಕಾರಿಯಾಗಿ ಬಹಳ ಹೆಸರುವಾಸಿಯಾಗಿದ್ದರು. ಕಳೆದ ವರ್ಷ ದಕ್ಷಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದಾಗ ದಿಢೀರನೆ ತಮ್ಮ ಉದ್ಯೋಗಕ್ಕೆ ರಾಜೀನಾಮೆ ಕೊಟ್ಟು ಸಾಮಾಜಿಕ ಹೋರಾಟಗಳಿಗೆ ಧುಮುಕಿದ್ದರು. ಎನ್ ಆರ್ ಸಿ ಮತ್ತು ಸಿಎಎ ಗಳನ್ನು ವಿರೋಧಿಸಿ ದೇಶದ ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆ, ವಿಚಾರ ಸಂಕೀರಣ, ಸಭೆ ಸಮಾರಂಭಗಳಲ್ಲಿ ಭಾಗವಹಿಸಿದ್ದರು. ಐಎಎಸ್ ಅಧಿಕಾರಿಯಾಗಿದ್ದುಕೊಂಡು ಸರ್ಕಾರದ ನಡೆಗಳ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂಬ ಕಾರಣದಿಂದಾಗಿ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದ ಸಸಿಕಾಂತ್ ಸೆಂಥಿಲ್ ಈಗ ಹೋರಾಟವನ್ನು ಮುಂದುವರೆಸುವ ದೃಷ್ಟಿಯಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ದರಿಸಿದ್ದೇನೆ ಎಂದು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಮಾತ್ರವಲ್ಲದೇ ‘ಎಲ್ಲಿದ್ದರೂ ನನ್ನ ಜೀವನದುದ್ದಕ್ಕೂ ನಿರ್ಲಕ್ಷ್ಯಕ್ಕೆ ಒಳಗಾದವರಿಗೆ ಧ್ವನಿಯಾಗಲು ಪ್ರಯತ್ನಿಸುತ್ತಿರುವ ಕಾರ್ಯಕರ್ತನಾಗಿರುತ್ತೇನೆ ಮತ್ತು ನನ್ನ ಕೊನೆಯ ಉಸಿರಿರುವವರೆಗೂ ಅದೇ ರೀತಿ ಮುಂದುವರಿಯುತ್ತೇನೆ’ ಎಂಬ ವಾಗ್ದಾನ ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights