RRನಗರ ಉಪಚುನಾವಣೆಯಲ್ಲಿ BJP ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು!

ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಂತಿಮ ಫಲಿತಾಂಶ ಬಂದಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವು ಸಾಧಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ನಿಂದ ಎರಡು ಬಾರಿ ಗೆಲುವು ಸಾಧಿಸಿದ್ದ ಮುನಿರತ್ನ ಅವರು ಈ ಬಾರಿ ಬಿಜೆಪಿ ಸೇರಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮುನಿರತ್ನ ಅವರು ಅಂತಿಮವಾಗಿ 57,672 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಬಿಜಿಪಿಯ ಮುನಿರತ್ನ ಅವರು ಒಟ್ಟು 125665 ಮತಗಳನ್ನು ಪಡೆದರೆ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು 67993 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಬಿಜೆಪಿ ಮತ್ತು ಕಾಂಗ್ರೆಸ್‌ನ ಅಬ್ಬರದ ಪ್ರಚಾರ, ಆರೋಪ– ಪ್ರತ್ಯಾರೋಪ, ಜಾತಿ– ಕಣ್ಣೀರ ರಾಜಕಾರಣದ ಕಾರಣದಿಂದ ರಾಜರಾಜೇಶ್ವರಿ ನಗರದ ಉಪ ಚುನಾವಣೆ ಭಾರೀ ಕುತೂಹಲ ಕೆರಳಿಸಿತ್ತು. ಅಲ್ಲದೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಮಧ್ಯೆ ಜಿದ್ದಾಜಿದ್ದಿನ ಪೈಪೋಟಿ ನಡೆಯಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ, ಮತದಾರ ಬಿಜೆಪಿ ‘ಕೈ’ ಹಿಡಿದಿರುವುದು ಬಹುತೇಕ ಸ್ಪಷ್ಟವಾಗಿದೆ.

ಇದನ್ನೂ ಓದಿ: ಉಪ ಚುನಾವಣೆ; ಗೆಲುವಿನ ಖಾತೆ ತೆರೆದ ಬಿಜೆಪಿ: ಮಣಿಪುರದ ಸಿಂಗಾಟ್‌ನಲ್ಲಿ BJP ಗೆಲುವು!

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights